ಬೆಳ್ತಂಗಡಿ:Tulu Times | ಸಕಲೇಶಪುರದ ಅವಿವಾಹಿತ ಯುವಕ ಸಾಲದ ಭಯಕ್ಕೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಯಾರು..?
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೇರ್ಹಳ್ಳಿ ಗ್ರಾಮದ ಅಭಿಷೇಕ್ (31) ಎಂಬಾತ ತಾನು ಮಾಡಿದ ವಿಪರೀತ ಸಾಲದ ನೋವಿನಿಂದ ಬೇಸತ್ತು ನೊಂದು ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಹೀಗಾಗಿ ಈತ ಮಂಗಳೂರಿನ ಕಡೆಗೆ ಬಂದು ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯವರಿಗೆ ಫೋನ್ ಮಾಡಿ ತಿಳಿಸಿ ನೀರಿಗೆ ಹಾರಿದ ಯುವಕ !
ಜ.9 ಕ್ಕೆ ಅಭಿಷೇಕ್ ತನ್ನ ಊರಿನಿಂದ ನಾಪತ್ತೆಯಾಗಿ, ಧರ್ಮಸ್ಥಳದ ನೇತ್ರಾವತಿ ನದಿಗೆ ಬಂದು ಮನೆಯವರಿಗೆ ‘ನನಗೆ ಸಾಲದ ಒತ್ತಡ ಜಾಸ್ತಿಯಾಗುತ್ತಿರುವ ಕಾರಣದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ’ ಮೆಸೇಜ್ ಮಾಡಿ ಬಳಿಕ ಕರೆ ಮೂಲಕ ‘ನಾನು ಧರ್ಮಸ್ಥಳದ ನೇತ್ರಾವತಿ ನದಿ ಬಳಿ ಬಂದಿದ್ದು ನಾನು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಈ ವಿಚಾರ ತಿಳಿದಂತೆ ಈತನ ಮನೆಯವರು ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಂತರ ಸಕಲೇಶಪುರದಿಂದ ಕುಟುಂಬ ಬಂದು ಧರ್ಮಸ್ಥಳದ ಸುತ್ತ ಮುತ್ತ ತೀವ್ರ ಹುಡುಕಾಟ ನಡೆಸಿದ್ದಾರೆ. ಜ.11 ರಂದು ಬೆಳಗ್ಗೆ, ಅಭಿಷೇಕ್ ಮೃತದೇಹ ನೇತ್ರಾವತಿ ನದಿಯಲ್ಲಿ ಕುಟುಂಬದವರಿಗೆ ಪತ್ತೆಯಾಗಿದೆ. ಈ ಬಗ್ಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ, ಪ್ರಕರಣ ದಾಖಲು
ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ, ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರುವ ಮೂವರ ಮೇಲೆ ಅಪರಿಚಿತರಿಂದ ಹಲ್ಲೆಯಾಗಿದ್ದು, ಪ್ರಕರಣ ದಾಖಲಾಗಿದೆ.
ಜ.10 ರಂದು ಅಪರಾಹ್ನ 3:15 ರ ಸುಮಾರಿಗೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತು ಅವರಿಬ್ಬರು ಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ ನಡೆಸಿದ್ದಾರೆ.ನಾವೂರು ಗ್ರಾಮದ ನಿರಿಂದಿ ನಿವಾಸಿ ರಝಾಕ್ ಅವರ ಪತ್ನಿ ಆಸೀದಾ(38), ಪುತ್ರರಾದ ಮುಝಫರ್(20) ಮತ್ತು ಮುರ್ಷಿದ್ (19) ಹಲ್ಲೆಗೊಳಗಾದರಾಗಿದ್ದಾರೆ. ಈ ಕುರಿತಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದರಲ್ಲಿ ಮುಝಪರ್ ಅವರ ತಲೆಗೆ ಗಾಯವಾಗಿದೆ. ಇವರ ಜೊತೆಗೆ ಪುಟ್ಟ ಮಕ್ಕಳು ಕೂಡ ಇದ್ದರು. ಮಂಗಳೂರಿನ ಉಚ್ಚಿಲದಲ್ಲಿ ನಡೆಯಬೇಕಿದ್ದ ಕುಟುಂಬ ಕಾರ್ಯಕ್ರಮಕ್ಕೆ ಹೋಗುವ ಉದ್ದೇಶದಿಂದ ಕಳೆದ ಜ.9 ರಂದು ನಾವೂರು ಮನೆಗೆ ಆಗಮಿಸಿ ಜ.10 ರಂದು 3 ಗಂಟೆಗೆ ತಾಯಿ ಸಹೋದರ ಸಹಿತ ಕೆಎಸ್‌ಆರ್‌ಟಿಸಿ KA-19-F-3139 ನಂಬರಿನ ಬಸ್ಸಿನಲ್ಲಿ ಮಂಗಳೂರಿಗೆ ಪ್ರಯಾಣ ಹೊರಟಿದ್ದರು.
ಬೆಳ್ತಂಗಡಿಯಲ್ಲಿ ಬಸ್ಸು ಹತ್ತಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಹಿಳೆಯರೂ ಇದ್ದ ಬಸ್ಸಿನಲ್ಲಿ ಜೋರಾದ ಶಬ್ದದಲ್ಲಿ ಕೆಟ್ಟ ಭಾಷೆಯಲ್ಲಿ ಮಾತನಾಡುತ್ತಿದ್ದರು. ಇದು ಇತರ ಪ್ರಯಾಣಿಕರಿಗೆ ಮತ್ತು ಮಹಿಳೆಯರಿಗೆ ಮುಜುಗರ ತಂದಿದೆ. ಈ ವರ್ತನೆ ಕಂಡು ಮುಝಫರ್ ಸಾರ್ವಜನಿಕವಾಗಿ ನೀವು ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಇಬ್ಬರು ಯುವಕರಿಗೆ ತಿಳಿಸಿದನ್ನೇ ನೆಪವಾಗಿಟ್ಟುಕೊಂಡು ಅಪರಿಚಿತರು ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
Belthangady: A young man from Sakleshpur was found dead in the Netravati river!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











