ಬೆಂಗಳೂರು: Tulu Times | ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೆಂಗಳೂರು ಅರಮನೆ ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಮನರೇಗಾ ಉಳಿಸಿ ಆಂದೋಲನ ಆಯೋಜನೆ, ಬಿಎಲ್ಎ ಪಟ್ಟಿ, ಸ್ಥಳೀಯ ಸಂಸ್ಥೆ ಚುನಾವಣೆ ಕುರಿತ ಪೂರ್ವಭಾವಿ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳಾದ ಗೋಪಿನಾಥ್ ಪಳನಿಯಪ್ಪನ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಚೆಲುವರಾಯ ಸ್ವಾಮಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತಿತರರು ಉಪಸ್ಥಿತರಿದ್ದರು.
ಜನವರಿ 10, 2026 ರಿಂದ ಆರಂಭಗೊಂಡಿರುವ ಈ ಬೃಹತ್ ಆಂದೋಲನವು ಫೆಬ್ರವರಿ 25, 2026 ರವರೆಗೆ 45 ದಿನಗಳ ಕಾಲ ದೇಶಾದ್ಯಂತ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ತೀವ್ರ ಹೋರಾಟ ರೂಪಿಸಲಾಗುತ್ತಿದೆ.ಜನವರಿ 26 ರಿಂದ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ರಿಂದ 10 ಕಿ.ಮೀ. ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ.ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೆ ಜನಜಾಗೃತಿ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್ ಸಿನಿಮಾಗಳ ವೈಭವ
ಪ್ರಮುಖ ಬೇಡಿಕೆಗಳು ಯಾವುವು..?
ಹೊಸದಾಗಿ ಜಾರಿಗೆ ತಂದಿರುವ VB-GRAM G ಕಾಯ್ದೆಯನ್ನು ತಕ್ಷಣವೇ ಹಿಂಪಡೆಯಬೇಕು. ಹಳೆಯ ಮನರೇಗಾ ಕಾಯ್ದೆಯನ್ನು ಅದರ ಮೂಲ ಸ್ವರೂಪದಲ್ಲಿಯೇ (ಹಕ್ಕು ಆಧಾರಿತ ಉದ್ಯೋಗ ಖಾತರಿ) ಮರುಸ್ಥಾಪಿಸಬೇಕು. ಪಂಚಾಯತ್‌ಗಳ ಅಧಿಕಾರವನ್ನು ಕಸಿಯುವ ಪ್ರಯತ್ನವನ್ನು ಕೈಬಿಡಬೇಕು. ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ: ಕಾಂಗ್ರೆಸ್ ಪಕ್ಷವು ಬೂತ್ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೆ ಈ ಹೋರಾಟವನ್ನು ನಡೆಸುತ್ತಿದೆ. ಜ.11 ರಂದು ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಮತ್ತು ಸಾಂಕೇತಿಕ ಪ್ರತಿಭಟನೆಗಳನ್ನು ನಡೆಸಲಾಗಿದೆ.
ಬಜೆಟ್ ಹಂಚಿಕೆ: 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಮನರೇಗಾ ಯೋಜನೆಗೆ ಸುಮಾರು ₹86,000 ಕೋಟಿ ಹಂಚಿಕೆ ಮಾಡಲಾಗಿದೆ. ಆದರೆ, ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಏರಿಕೆಯಾಗಿಲ್ಲ ಮತ್ತು ಹಣದುಬ್ಬರಕ್ಕೆ ಅನುಗುಣವಾಗಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ.
Bengaluru: Save MNREGA movement organized- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











