ಮಂಗಳೂರು: Tulu Times | ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉಳ್ಳಾಲದ ಅಯ್ಯಪ್ಪ ಮಾಲಾಧಾರಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಶನಿವಾರದಂದು ನಗರದ ಅರ್ಕುಳ, ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇನ್ನು ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಮರಣೋತ್ತರ ಪರೀಕ್ಷೆಯನ್ನು ಬೇಗ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ನಂತರ ಪಾರ್ಥಿವ ಶರೀರವು ಉಳ್ಳಾಲ ತಲುಪಲಿದೆ. ಮೃತ ಚಂದ್ರಹಾಸ್ ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಮೂಲತ: ಬಾಕ್ರಬೈಲ್ ನಿವಾಸಿಯಾದ ಚಂದ್ರಹಾಸ್ , ಕಳೆದ ಹತ್ತು ವರುಷದ ಹಿಂದೆ ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.
ಧರ್ಮಸ್ಥಳ: ಅಸಹಜ ಸಾವು ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣೆ
ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ 74 ಅಸಹಜ ಸಾವು ಪ್ರಕರಣ ಹೈಕೋರ್ಟ್ ನಲ್ಲಿ ಮುಖ್ಯನ್ಯಾಯಮೂರ್ತಿ ಪೀಠದ ಮುಂದೆ ವಿಚಾರಣೆಗೆ ಬಂದಿದೆ.ಪ್ರತ್ಯೇಕ ಎಫ್‌ಐಆರ್ ಮಾಡಿ ತನಿಖೆ ನಡೆಸಲು ಸೌಜನ್ಯತಾಯಿ ಕುಸುಮಾವತಿ ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಈ ಪ್ರಕರಣಗಳ ತನಿಖೆ ಮಾಡಲೆಂದೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿಯು ಕೇವಲ ಒಂದು ಎಫ್‌ಐಆರ್ ದಾಖಲಿಸಿದೆ. ಉಳಿದ 74 ಕೊಲೆ, ನಾಪತ್ತೆ, ಸಾವು ಪ್ರಕರಣಗಳಿಗೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.ಧರ್ಮಸ್ಥಳ ಎಂಬ ಗ್ರಾಮದ ಸಣ್ಣ ಹೊರಠಾಣೆ ಪೋಲೀಸ್ ಠಾಣಾ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವು ಪ್ರಕರಣಗಳು ವರದಿಯಾಗಿದೆ. “ಒಂದು ಸಣ್ಣ ಗ್ರಾಮದಲ್ಲಿ, 74 ಅಸಹಜ ಸಾವು ಸಂಭವಿಸಿದ್ದು ಒಂದು ಎಫ್‌ಐಆರ್ ಮೂಲಕ ಅದರ ಕ್ರಿಮಿನಲ್ ವಿಚಾರಣೆ ನಡೆದಿದೆ. ಇದು ಸರಿಯಾದ ಕ್ರಮವಲ್ಲ.” ಎಂದು ಎಸ್ ಬಾಲನ್ ವಾದ ಮಂಡಿಸಿದ್ದಾರೆ. ಸರ್ಕಾರಕ್ಕೆ ಇನ್ನೂ ಪ್ರಕರಣದ ದಾಖಲೆ ಸಲ್ಲಿಸಿಲ್ಲ. ದಾಖಲೆ ಇಲ್ಲದೇ ಸರ್ಕಾರ ಅಭಿಪ್ರಾಯ ಹೇಳಲು ಹೇಗೆ ಸಾಧ್ಯ?” ಎಂದು ಸರ್ಕಾರದ ಪರ ವಕೀಲರು ಹೇಳಿದ್ದಾರೆ. ಫೆಬ್ರವರಿ 3 ಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಂದೂಡಲಾಗಿದೆ.
ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳ ತನಿಖೆಯ ವರದಿ ಮತ್ತು ಪ್ರಗತಿಯನ್ನು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.ಜುಲೈ 2025ರಲ್ಲಿ ರಚನೆಯಾದ ವಿಶೇಷ ತನಿಖಾ ತಂಡವು ಈ ಹಿಂದೆ 17 ಸ್ಥಳಗಳಲ್ಲಿ ಉತ್ಪನನ ನಡೆಸಿದ್ದು, ಕೆಲವು ಕಡೆಗಳಲ್ಲಿ ಅಲ್ಪಪ್ರಮಾಣದ ಮಾನವ ಅವಶೇಷಗಳು ಪತ್ತೆಯಾಗಿದ್ದವು. ಆದರೆ, ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ದೂರುದಾರ ಚಿನ್ನಯ್ಯ ಎಂಬಾತನನ್ನು ಆಗಸ್ಟ್ 2025ರಲ್ಲಿ ಬಂಧಿಸಲಾಗಿತ್ತು. 2012ರಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ, ಈ ಭಾಗದಲ್ಲಿ ನಡೆದಿರುವ ಇತರ ಆಸಹಜ ಸಾವುಗಳ ಬಗ್ಗೆ ನಿರಂತರ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ.
Ayyappa Maladhari of Ullala dies of heart attack- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











