ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ: ಧನುಪೂಜೆಗೆ ಹೋಗಿದ್ದ ಬಾಲಕ ಶವವಾಗಿ ಪತ್ತೆ!

ಬೆಳ್ತಂಗಡಿ:Tulu Times | ಕಳಿಯ ದೇವಸ್ಥಾನಕ್ಕೆ ಧನುಪೂಜೆಗೆ ತೆರಳಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದ, ಇದೀಗ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ವಿವರಣೆ ಏನು..?

ಧನುಪೂಜೆಗೆಂದು ಮುಂಜಾನೆ 4 ಗಂಟೆಗೆ ಮನೆಯಿಂದ ಹೋದ ಬಾಲಕ ನಾಪತ್ತೆಯಾಗಿದ್ದ, ಎಷ್ಟೇ ಹುಡುಕಿದರೂ ಬಾಲಕ ಪತ್ತೆಯಾಗಿರಲಿಲ್ಲ. ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್, ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ  (15ವ) ಇಂದು ಮುಂಜಾನೆ 4 ಗಂಟೆಗೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು  ಕಾದು ದೇವಸ್ಥಾನಕ್ಕೆ ತೆರಳಿದ್ದರು. ಬೆಳಗ್ಗೆ ಬೇಗನೇ ಮನೆಯಿಂದ ಹೊರಟರೂ ಸುಮಂತ್‌ ಗೆಳೆಯರಿಗೆ ಸಿಕ್ಕಿರಲಿಲ್ಲ. ದೇವಸ್ಥಾನಕ್ಕೂ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಸುಮಂತ್‌ ಗೆಳೆಯ ಆತನ ಮನೆಯವರಿಗೆ ಫೋನ್‌ ಮಾಡಿ ಸುಮಂತ್‌ ಬಗ್ಗೆ ವಿಚಾರಿಸಿದ್ದ. ಹೀಗಾಗಿ, ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದ್ರೆ ದೇವಸ್ಥಾನಕ್ಕೆ ಸುಮಂತ್‌ ಬಂದಿಲ್ಲ ಎಂದು ಗೊತ್ತಾದಾಗ ಮನೆಯವರು ಗಾಬರಿಯಾಗಿದ್ದಾರೆ.

ಇನ್ನು ಈತನ ಗೆಳೆಯರು  ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗಬೇಕು ಅಂತ ಅಂದುಕೊಂಡಿದ್ದರು.  ಸುಮಂತ್‌ ನಾಪತ್ತೆಯಾದ ವಿಚಾರವನ್ನು ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು. ಹೀಗಾಗಿ, ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು, ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ ಸ್ಥಳೀಯರು ಸೇರಿ ಹುಡುಕಾಟ ನಡೆಸಿದ್ದಾರೆ. ಜ.14 ರಂದು ಬೆಳಗ್ಗೆ, 11:30 ಕ್ಕೆ ಬಾಲಕನ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ. ಇನ್ನು ಬಾಲಕನ ತಲೆಯ ಭಾಗಕ್ಕೆ ಗಂಭೀರವಾದ ಗಾಯವಾಗಿರೋದು ಗೊತ್ತಾಗಿದೆ. ಇನ್ನು ಸಾವಿನ ಬಗ್ಗೆ, ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ. ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಾಪುರ್ ಮಠ, ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ, ತಹಶೀಲ್ದಾರರು ಪೃಥ್ವಿ ಸಾನಿಕಂ, ಆರ್ ಐ ಪಾವಡಪ್ಪ, ಆಡಳಿತಾಧಿಕಾರಿ, ಬಿಒ ತಾರಕೇಸರಿ, ಶಾಲಾ ಶಿಕ್ಷಕರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Belthangady: Body of boy who went to Dhanupuja found- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 159

You cannot copy content of this page