ಉಡುಪಿ: Tulu Times | ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., (ಐಎಎಸ್ ) ಅವರ ಹೆಸರು ಹಾಗೂ ಫೋಟೋ ಬಳಸಿಕೊಂಡು ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆಗಾಗಿ ಸಂದೇಶಗಳನ್ನು ಕಳುಹಿಸಲಾಗುತ್ತಿದೆ ಎಂದು ಅವರು ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ;
ಯಾರು ಅಂತ ಗುರುತಿಸಲಾಗದ ವ್ಯಕ್ತಿಗಳು ಜಿಲ್ಲಾಧಿಕಾರಿಯ ಹೆಸರು ಮತ್ತು ಚಿತ್ರವನ್ನು ದುರುಪಯೋಗಪಡಿಸಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸಿ, ವಿವಿಧ ನೆಪಗಳನ್ನು ಹೇಳಿ ಹಣ ಕಳುಹಿಸುವಂತೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಈಗಾಗಲೇ ಉಡುಪಿ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೆಸರು ಹಾಗೂ ಫೋಟೋ ಬಳಸಿ ಹಣ ವರ್ಗಾವಣೆ ;
ಇಂತಹ ಘಟನೆಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ತಮ್ಮ ಹೆಸರು ಹಾಗೂ ಫೋಟೋ ಬಳಸಿ ಹಣ ವರ್ಗಾವಣೆ ಅಥವಾ ಇತರ ಬೇಡಿಕೆಗಳನ್ನು ಮಾಡುವ ಯಾವುದೇ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಬಂದರೆ, ಅವಕ್ಕೆ ಪ್ರತಿಕ್ರಿಯಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ. ಇಂತಹಾ ಸಂದೇಶಗಳು ಬಂದ ತಕ್ಷಣವೇ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಸಾರ್ವಜನಿಕರು ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಡಳಿತ ಹಾಗೂ ನಾಗರಿಕರು ಸದಾ ಎಚ್ಚರಿಕೆಯಿಂದಿರಬೇಕು ಹಾಗೂ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದರು.
Public warned of fake social media account in DC’s name – ತುಳು ಟೈಮ್ಸ್
ಇದನ್ನೂ ಓದಿ :ಮೂಲ ಸೌಲಭ್ಯಗಳ ಕೊರತೆಯ ನಡುವೆಯೇ ಶಾಲೆಗಳಲ್ಲಿ ‘ವಾಟರ್ ಬೆಲ್’ ಜಾರಿ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/SDL5CAMpIQ0?si=805wapMf0eOAJadz











