ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಕಾಂಗ್ರೆಸ್ಸಿನ ಬಳ್ಳಾರಿ ಜಿಲ್ಲೆಯ ನಾಯಕರ ಕುರ್ಚಿ ಅಲ್ಲಾಡತೊಡಗಿದೆ -ಬಸವರಾಜ ಬೊಮ್ಮಾಯಿ

ಬಳ್ಳಾರಿ:Tulu Times | ಜನಾರ್ಧನ ರೆಡ್ಡಿ ಮತ್ತು ಅವರ ಆತ್ಮೀಯ ಸ್ನೇಹಿತ ಬಿ.ಶ್ರೀರಾಮುಲು ಅವರು ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್ಸಿನ ಬಳ್ಳಾರಿ ಜಿಲ್ಲೆಯ ನಾಯಕರ ಕುರ್ಚಿ ಅಲ್ಲಾಡತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ವಿಶ್ಲೇಷಿಸಿದ್ದಾರೆ.

ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮುಲು ಅವರ ವೇಗ- ಜನಾರ್ಧನ ರೆಡ್ಡಿಯವರ ಶಕ್ತಿ, ಬಿರುಗಾಳಿ ಮತ್ತು ಬೆಂಕಿಯಂತೆ ಎಂದು ಅವರು ನುಡಿದರು. ಇದೇ ಕಾರಣಕ್ಕಾಗಿ ಬಳ್ಳಾರಿಯಲ್ಲಿ ಈ ಕೃತ್ಯ ನಡೆದಿದೆ ಎಂದು ತಿಳಿಸಿದರು.

ಅವರ ಬಳಿ ಎಷ್ಟು ಗುಂಡಿದೆಯೋ ನಾವೂ ನೋಡೋಣ ಎಂದು ಸವಾಲು ಹಾಕಿದರು. ಅವರೆಷ್ಟೇ ಗುಂಡು ಹೊಡೆದರೂ ನಮ್ಮ ಶಕ್ತಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು. ಹುಬ್ಬಳ್ಳಿಯಲ್ಲಿ ಪೊಲೀಸರು ದಲಿತ ಹೆಣ್ಮಗಳ ಬಟ್ಟೆ ತೆಗೆದಿದ್ದಾರೆ. ಅವರೇ ತೆಗೆದಿದ್ದಾರೆಂದು ಕಮೀಷನರ್ ಸುಳ್ಳು ಕಟ್ಟು ಕಥೆ ಹೇಳಿದ್ದಾರೆ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಭ್ರಷ್ಟ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಈ ಪ್ರತಿಭಟನೆ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ. ಸುನೀಲ್ ಕುಮಾರ್, ಪಿ. ರಾಜೀವ್, ಶಾಸಕ ಜಿ. ಜನಾರ್ಧನ ರೆಡ್ಡಿ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಗುಂಡು ಹಾರಿಸಿದವರು ಸುಪಾರಿ ಕಿಲ್ಲರ್‍ಗಳು. ಅವರು ಸರಕಾರಿ ಗನ್‍ಮ್ಯಾನ್‍ಗಳಲ್ಲ ಎಂದು ತಿಳಿಸಿದರು. ಸುಪಾರಿ ಕಿಲ್ಲರ್‍ಗಳನ್ನು ಕರೆದುಕೊಂಡು ಬಂದು ಭರತ್ ರೆಡ್ಡಿ ದೊಡ್ಡ ಅಪರಾಧ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ನೈತಿಕತೆ ಇದ್ದರೆ ಮೊದಲು ಭರತ್ ರೆಡ್ಡಿಯವರನ್ನು ಬಂಧಿಸಿ; ನಂತರ ತನಿಖೆ ಮಾಡಿ ಎಂದು ಆಗ್ರಹಿಸಿದರು. ಇಲ್ಲವೇ ಸಿಬಿಐಗೆ ತನಿಖೆ ಒಪ್ಪಿಸಿ ಎಂದು ಒತ್ತಾಯಿಸಿದರು. ಅಧಿಕಾರ ಶಾಶ್ವತವಲ್ಲ; ಯಾವ ರೀತಿ ಅಧಿಕಾರ ಮಾಡಿದ್ದೀರಿ ಎಂಬುದಷ್ಟೇ ಶಾಶ್ವತ ಎಂದು ಕಿವಿಮಾತು ಹೇಳಿದರು.

The position of Congress leaders in Bellary district is starting to shake – Basavaraj Bommai- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page