ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ

ಮಂಗಳೂರು: Tulu Times | ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನನ್ನು ಕದ್ರಿ ಪೊಲೀಸರು ಬಂಧಿಸಿದಾರೆ. ಕೇರಳ ಎರ್ನಾಕುಲಂನ ಜೂಡ್ ಮಾಥ್(20)ಎಂಬಾತ ಬಂಧಿತ ವ್ಯಕ್ತಿ.

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಯುವಕನೊಬ್ಬನು ಬೈಕ್ ನಲ್ಲಿ ನಿಷೇಧಿತ MDMA ಎಂಬ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆಂದು ಮಾಹಿತಿ ಮೇರೆಗೆ ದಿನಾಂಕ 17-01-2026 ರಂದು ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು 5.20 ಗ್ರಾಂ ತೂಕದ MDMA ಮಾದಕ ವಸ್ತು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಎನ್.ಎಸ್ ಬೈಕ್ ಸಮೇತ ಒಟ್ಟು ರೂ 70,000/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

ಇದನ್ನೂ ಓದಿ:‌ ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ಧನ ರೆಡ್ಡಿ

ಉಡುಪಿ: ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ನಾಪತ್ತೆ

ಉಡುಪಿ: ಉಡುಪಿ ತಾಲೂಕು 76 ಬಡಗುವೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ನಾಪತ್ತೆಯಾಗಿರುವ ಘಟನೆ ನಡೆದಿದೆ.

ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಒಂದನೇ ಮಹಡಿಯಲ್ಲಿ ವಾಸವಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ ನಾಪತ್ತೆಯಾಗಿದ್ದಾರೆ. ಜನವರಿ 12 ರಂದು ರಾತ್ರಿ8 ಬಳಿಕ ದರ್ಶನ್ ನಾಪತ್ತೆಯಾಗಿದ್ದಾರೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444. ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು ದೂ.ಸಂಖ್ಯೆ: 9480805445 ಅನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ಉಜಿರೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ!

Mangaluru: Drug dealer arrested- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 154

You cannot copy content of this page