ಬ್ರೇಕಿಂಗ್ ನ್ಯೂಸ್
ಕರ್ನಾಟಕಕ್ರೀಡೆ

WPL 2026: ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ

WPL 2026:Tulu Times | ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (Gujarat Giants vs RCB) ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಎಂಟ್ರಿ ಕೊಟ್ಟು, ಸತತ 5ನೇ ಗೆಲುವು ಕಂಡಿದೆ.

ಆರ್​ಸಿಬಿ  ದಾಳಿಗೆ ತತ್ತರಿಸಿದ ಗುಜರಾತ್!

ವಡೋದರಾದಲ್ಲಿ ನಡೆದ ಪಂದ್ಯದಲ್ಲಿ ಏಕಪಕ್ಷೀಯವಾಗಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಅರ್ಹತೆ ಪಡೆದುಕೊಂಡಿದೆ. ಆದರೆ ಆರ್​ಸಿಬಿ  ದಾಳಿಗೆ ತತ್ತರಿಸಿದ ಗುಜರಾತ್ ಬರೋಬ್ಬರಿ 61 ರನ್​ಗಳಿಂದ ಸೋಲು ಕಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿಗೆ ಮತ್ತೆ ಕಳಪೆಯಾಗಿತ್ತು. ಸ್ಫೋಟಕ ಬ್ಯಾಟರ್ ಗ್ರೇಸ್ ಹ್ಯಾರಿಸ್ 1 ರನ್​ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಜಾರ್ಜಿಯಾ ವೋಲ್ ಕೂಡ ಒಂದೇ ಒಂದು ರನ್​ಗೆ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ಆರ್​ಸಿಬಿ 9 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿತು. ಆ ಬಳಿಕ ಜೊತೆಯಾದ ಸ್ಮೃತಿ ಹಾಗೂ ಗೌತಮಿ ತಂಡವನ್ನು 50 ರನ್​ಗಳ ಗಡಿ ದಾಟಿಸಿದರು. 96 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಸ್ಮೃತಿ ಈ ಪಂದ್ಯದಲ್ಲಿ 26 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

ಇದನ್ನೂ ಓದಿ: ಡಿಜಿಪಿ ಅಶ್ಲೀಲ ವೀಡಿಯೋ ಬಗ್ಗೆ ತನಿಖೆಗೆ ಸಿಎಂ ಖಡಕ್ ಆದೇಶ!

ಗೌತಮಿ ನಾಯಕ್ ಹಾಗೂ ರಿಚಾ ಘೋಷ್  ಜೋಡಿ 68 ರನ್​ಗಳ ಜೊತೆಯಾಟವನ್ನಾಡಿ ತಂಡವನ್ನು 100 ರನ್​ಗಳ ಗಡಿ ದಾಟಿಸಿತು. ಗೌತಮಿ ನಾಯಕ್ ತಮ್ಮ ಚೊಚ್ಚಲ ಡಬ್ಲ್ಯುಪಿಎಲ್ ಅರ್ಧಶತಕ ಪೂರೈಸಿದರು. ಈ ಮೂಲಕ  ಅರ್ಧಶತಕ ಬಾರಿಸಿದ ಮೊದಲ ಅನ್​ಕ್ಯಾಪ್ಡ್ ಆಟಗಾರ್ತಿ ಎಂಬ ಇತಿಹಾಸ ಸೃಷ್ಟಿಸಿದ್ದಾರೆ. ಗೌತಮಿ ನಾಯಕ್ 73 ರನ್‌ಗಳ ಇನ್ನಿಂಗ್ಸ್‌ ಆಡಿದರೆ, ರಿಚಾ 27 ರನ್ ಬಾರಿಸಿದರು.  ಹೀಗಾಗಿ ಆರ್​ಸಿಬಿ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳಿಗೆ 178 ರನ್ ಗಳಿಸಿತು. ಗುಜರಾತ್ ಪರ ಕಾಶ್ವಿ ಗೌತಮ್ ಮತ್ತು ಆಶ್ಲೀ ಗಾರ್ಡ್ನರ್ ತಲಾ ಎರಡು ವಿಕೆಟ್ ಪಡೆದರೆ, ರೇಣುಕಾ ಸಿಂಗ್ ಮತ್ತು ಸೋಫಿ ಡಿವೈನ್  ಒಂದು ವಿಕೆಟ್ ಪಡೆದರು. ಬೆತ್ ಮೂನಿ ಹಾಗೂ ಸೋಫಿ ಡಿವೈನ್ ಬಹುಬೇಗನೇ ಪೆವಿಲಿಯನ್ ಸೇರಿಕೊಂಡರು. ಆ ಬಳಿಕ ಬಂದವರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ.  ಏಕಾಂಗಿ ಹೋರಾಟ ನಡೆಸಿದ ನಾಯಕಿ ಆಶ್ಲೀಗ್ ಗಾರ್ಡ್ನರ್ 54 ರನ್ ಬಾರಿಸಿದರಾದರೂ ಅಷ್ಟರಲ್ಲಿ ಪಂದ್ಯ ಆರ್​ಸಿಬಿ ಪರ ವಾಲಿತ್ತು.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page