ಪುತ್ತೂರು:ತುಳುಟೈಮ್ಸ್| ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ(37)ಮತ್ತು ಅಬ್ದುಲ್ ಸಾದಿಕ್ (37)ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಸಂಜೆ ಕಾರು ಮತ್ತು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಪೊಲೀಸರಿಗೆ ಮಾಹಿತಿ ಬಂದಿತ್ತು.ಈ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆಗೆ ಇಳಿದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಕಾರು ಹಾಗೂ ಗೂಡ್ಸ್ ವಾಹನವನ್ನು ತಪಾಸಣೆಗಾಗಿ ನಿಲ್ಲಿಸಿದ್ದಾರೆ,
ಕಾರಿನ ಚಾಲಕನಲ್ಲಿ ವಿಚಾರಿಸಿದಾಗ ಆತ ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ(37)ಎಂಬುದಾಗಿ ತಿಳಿಸಿದ್ದ, ಆತನ ವರ್ತನೆಯಿಂದ ಅನುಮಾನಗೊಂಡು ಕಾರನ್ನು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿ ತುಂಬಿಸಿ ಇದ್ದ ಕಟ್ಟು ಪತ್ತೆಯಾಗಿದೆ. ಆ ಬಳಿಕ ಗೂಡ್ಸ್ ವಾಹನದ ಚಾಲಕನ ಬಳಿ ವಿಚಾರಿಸಿದಾಗ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37)ಎಂಬುದಾಗಿ ತಿಳಿಸಿದ್ದಾನೆ.
ಆತನ ವಾಹನ ಪರಿಶೀಲಿಸಿದಾಗ ವಾಹನದಲ್ಲಿ 106 ಕಿಲೋ ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿರುತ್ತದೆ.ಸುಮಾರು 53,03,000 ರಷ್ಟು ಬೆಲೆಬಾಳುವ ಗಾಂಜಾ ವಶಕ್ಕೆ ಪಡೆಯಲಾಗಿದೆ.ಈ ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಬಂಧಿತರು ಬಾಯಿಬಿಟ್ಟಿದ್ದಾರೆ.
ಸದ್ರಿ ಗಾಂಜಾ, ಸಾಗಾಣಿಕೆಗೆ ಬಳಸಿದ ವಾಹನಗಳನ್ನು ಹಾಗೂ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ. ಕ್ರ :09/2026,ಕಲಂ 8(c), 20(b)(ii)C NDPS Act-1985. ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
Two arrested with ganja in Puttur police operation tulutimes ಇದನ್ನೂ ಓದಿ : ಕರಾವಳಿಯಲ್ಲಿ ಸುಸಜ್ಜಿತ ಸ್ಟುಡಿಯೋ ರೆಡಿ ಆಗುತ್ತೆ: ರಾಜ್ ಬಿ. ಶೆಟ್ಟಿ!
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess











