ಸುಬ್ರಹ್ಮಣ್ಯ: Tulu Times | ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಮಿಶ್ರತಲಿ ಹೆಣ್ಣು ಕರಗಳ ಪ್ರದರ್ಶನ ಹಾಗೂ ವಿಚಾರಗೋಷ್ಠಿ ಕುಲ್ಕುಂದದಲ್ಲಿ ನಡೆಯಿತು.
ಪ್ರದರ್ಶನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಭರತ್ ನೆಕ್ರಾಜೆ ಉದ್ಘಾಟಿಸಿ, ದೇವಳದ ಪ್ರಧಾನ ಅರ್ಚಕ ಗಣೇಶ ದೀಕ್ಷಿತ್ ಅವರು ಗೋವುಗಳಿಗೆ ಪೂಜೆ ಸಲ್ಲಿಸಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು.ಸಭಾ ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಉದ್ಘಾಟಿಸಿದರು.
ಇದನ್ನೂ ಓದಿ: ಶುಭಕೃತ್ ನಾಮ ಸಂವತ್ಸರ’ ತಂಡ ಸೇರಿದ ತೆಲುಗು ನಟ..ನರೇಶ್ ಬರ್ತ್ ಡೇಗೆ ಗ್ಲಿಂಪ್ಸ್ ರಿಲೀಸ್
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಬಸವೇಶ್ವರ ಚಾರಿಟಬಲ್ ಟ್ರಸ್ಟ್, ಬಸವೇಶ್ವರ ದೇವಸ್ಥಾನ ಬಸವನ ಮೂಲ ಕುಲ್ಕುಂದ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಮಠ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮಿಶ್ರತಲಿ ಹೆಣ್ಣು ಕರಗಳ ಪ್ರದರ್ಶನ,ವಿಚಾರಗೋಷ್ಠಿ ಪರಿಕರಗಳ ಪ್ರಾತ್ಯಕ್ಷಿತ ಕುಲ್ಕುಂದದಲ್ಲಿ ನಡೆಯಿತು.
ಇದನ್ನೂ ಓದಿ: ಭಾರತದಲ್ಲೇ ಭಾರೀ ಅವಕಾಶ, ಜಾಗತಿಕ ವಿಸ್ತರಣೆಗೆ ಈಗ ಯೋಜನೆ ಇಲ್ಲ : ಸ್ವಿಗ್ಗಿ
ಯಾರೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..?
ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಅರುಣ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್ ಡಿ.ಆರ್., ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಉಪಾಧ್ಯಕ್ಷ ರವೀಂದ್ರ ಕುಮಾರ ರುದ್ರಪಾದ, ಕಡಬ ಕೆಡಿಪಿ ಸದಸ್ಯ ಶಿವರಾಮ ರೈ ಮತ್ತಿತರರು ಭಾಗವಹಿಸಿದ್ದರು. ಇನ್ನು 70 ಕರುಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು. ವಿಶೇಷ ತಳಿಯ ಕರುಗಳ ಪ್ರದರ್ಶನದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ, ಕೃಷಿಕ ಪಟೇಲ್ ಕಿಶೋರ್ ಕುಮಾರ್ ಕೂಜುಗೋಡು ಕಾರ್ಯಕ್ರಮ ನಿರೂಪಿಸಿದರು.
Subrahmanya: Mixed breed female calf exhibition- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











