ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಒಬಿಸಿ ಸಮುದಾಯಕ್ಕೆ ಅವಕಾಶ- ರಘು ಕೌಟಿಲ್ಯ ಮನವಿ

ಬೆಂಗಳೂರು: Tulu Times | ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಜಿಬಿಎ ಚುನಾವಣೆಯಲ್ಲಿ ಒಬಿಸಿ ಸಮುದಾಯಗಳಿಗೆ ಅವಕಾಶ ನೀಡಬೇಕೆಂದು ಹಾಗೂ ಒಬಿಸಿಯಲ್ಲಿ ಬರುವ ಸಣ್ಣ ಸಣ್ಣ ಸಮುದಾಯವನ್ನು ಗುರುತಿಸಿ ಮುಂಬರುವ ಸಂಘಟನಾ ಪರ್ವದಲ್ಲಿ ಪಕ್ಷದ ಜವಾಬ್ದಾರಿಯನ್ನು ನೀಡಬೇಕೆಂದು ವರಿಷ್ಠರಿಗೆ ಮನವಿ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಭಾಷಣೆಗೆ ಜೀವ ತುಂಬಿದ ಕಲಾವಿದರು : ಐದು ಮಂದಿಯ ಅದ್ಭುತ ನಾಟಕ

ಒಬಿಸಿ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರ ಯಾವುದೇ ಕಾರ್ಯಕ್ರಮವನ್ನು ಕೊಟ್ಟಿಲ್ಲ. ವಿವಿಧ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಸೇರಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಅನುದಾನ ಬಿಡುಗಡೆ ಮಾಡಿಲ್ಲ; ಕಾಂಗ್ರೆಸ್ ಸರ್ಕಾರ ಕಳೆದ 2.5 ವರ್ಷದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಅವಕಾಶ ನೀಡದೆ ನಿರಂತರವಾಗಿ ಈ ಸಮುದಾಯಗಳನ್ನು ತುಳಿಯುತ್ತಾ ಇದೆ ಎಂದು ಅವರು ಆಕ್ಷೇಪಿಸಿದರು.
ಕರ್ನಾಟಕದಲ್ಲಿ ಒಬಿಸಿ ಸಮುದಾಯಗಳಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಹಾಗೂ ಸಮುದಾಯವನ್ನು ಸಂಘಟಿಸಲು ರಾಜ್ಯ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸಭೆಗಳನ್ನು ಮುಂಬರುವ ದಿನಗಳಲ್ಲಿ ಆಯೋಜಿಸಲಾಗುವುದೆಂದು ಅವರು ತಿಳಿಸಿದರು.

ಮತಬ್ಯಾಂಕಿಗಾಗಿ ಒಬಿಸಿ ಸಮುದಾಯದ ಓಲೈಕೆ ಮಾಡುವ ಕಾಂಗ್ರೆಸ್- ಪಿ.ರಾಜೀವ್

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಮಾತನಾಡಿ, ಭಾರತೀಯ ಜನತಾ ಪಕ್ಷ ಸೈದ್ಧಾಂತಿಕವಾಗಿ ಒಬಿಸಿ ಸಮುದಾಯದ ಜೊತೆಗಿದೆ, ಕಾಂಗ್ರೆಸ್ ಪಕ್ಷ ಮತ ಬ್ಯಾಂಕ್‍ಗೋಸ್ಕರ ಒಬಿಸಿ ಸಮುದಾಯವನ್ನು ಓಲೈಕೆ ಮಾಡುತ್ತಿದೆ. ಬಿಜೆಪಿ ಒಬಿಸಿ ಸಮುದಾಯಗಳ ವಿವಿಧ ಪಂಗಡಗಳನ್ನು ಗುರುತಿಸಿ ರಾಜಕೀಯವಾಗಿ ಅವರಿಗೆ ಬಲ ತುಂಬುವ ಕೆಲಸವನ್ನು ಮಾಡಲಿದೆ ಎಂದು ತಿಳಿಸಿದರು.
ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರಾದ ಶ್ರೀಮತಿ ಪೂರ್ಣಿಮಾ ಪ್ರಕಾಶ್, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಬಿ. ಸೋಮಶೇಖರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Opportunity for OBC community – Raghu Kautilya appeals- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

 

 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 156

You cannot copy content of this page