ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಭಟ್ಕಳದಲ್ಲಿ ಮಹಿಳೆಯರಿಗೆ ಅಶ್ಲೀಲ ಸಂದೇಶ, ಬ್ಲ್ಯಾಕ್‌ಮೇಲ್ : ವಿದ್ಯಾರ್ಥಿ ಬಂಧನ

ಭಟ್ಕಳ : Tulu Times | ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಬಳಸಿಕೊಂಡು ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 19 ವರ್ಷದ ಯುವಕನನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೆಹ್ರಾನ್ ಮೆಹ್ತಾಬ್ ಶಾಬಂದಾರಿ ಎಂದು ಗುರುತಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮಾಂಕಿ ಮೂಲದವರಾಗಿದ್ದು, ಪ್ರಸ್ತುತ ಕುಮಟಾ ತಾಲ್ಲೂಕಿನ ತುಳಸಿ ಕಟ್ಟೆಯಲ್ಲಿ ವಾಸಿಸುತ್ತಿದ್ದ. ಆತ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿಸಿಎ ಕೋರ್ಸ್‌ ಓದುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಮದುವೆ ಸೇರಿದಂತೆ ವಿವಿಧ ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ, ಅಲ್ಲಿ ಪರಿಚಯವಿಲ್ಲದ ಮಹಿಳೆಯರ ಗುಪ್ತವಾಗಿ ಫೋಟೋ ತೆಗೆದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದ. ಬಳಿಕ ಆ ಮಹಿಳೆಯರಿಗೆ ಇಮೇಲ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಆರೋಪಿಯ ಬಳಿ 18 ನಕಲಿ ಇಮೇಲ್ ಐಡಿಗಳು ಇದ್ದವು ಎಂದು ತನಿಖೆಯಿಂದ ತಿಳಿದುಬಂದಿದೆ.

ಮಹಿಳೆಯರಿಗೆ ನಗ್ನ ಚಿತ್ರಗಳನ್ನು ಕಳುಹಿಸುವಂತೆ ಒತ್ತಡ ಹೇರುತ್ತಿದ್ದ ಆರೋಪಿಯು, ಅವರು ನಿರಾಕರಿಸಿದರೆ ಕೊಲೆ ಬೆದರಿಕೆ ಸೇರಿದಂತೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಧಮ್ಕಿ ಹಾಕುತ್ತಿದ್ದ. ಈ ವೇಳೆ ಕೆಲವು ಹಿಂದೂ ಧಾರ್ಮಿಕ ನಾಯಕರ ಹೆಸರನ್ನು ಉಲ್ಲೇಖಿಸಿ ಬೆದರಿಕೆ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಭಟ್ಕಳದ ಮಹಿಳೆಯೊಬ್ಬರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತು. ನಂತರ ಪ್ರಕರಣವನ್ನು ಸೈಬರ್ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಬಳಿಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Student arrested for sending obscene messages and blackmailing women in Bhatkal – ತುಳು ಟೈಮ್ಸ್

ಇದನ್ನೂ ಓದಿ : ಶಾಲಾ ಬಾಲಕಿಯರಿಗೆ ಮೆನ್ಸ್ಟ್ರುವಲ್ ಕಪ್ ವಿತರಣೆ : ಶಿಕ್ಷಕರು, ತಾಯಂದಿರಿಗೆ ತರಬೇತಿ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/live/XyP1Yl5GcG0?si=YrCKOC5S6ZXrG-9_

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page