ಬ್ರೇಕಿಂಗ್ ನ್ಯೂಸ್
ಕರ್ನಾಟಕಪುತ್ತೂರು

ಪುತ್ತೂರು: ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯ ಸಾವು

ಪುತ್ತೂರು: Tulu Times |  ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆಯಲ್ಲಿ   ನಿವೃತ್ತ ಮುಖ್ಯೋಪಾಧ್ಯಾಯ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಲ್ಯೂಮಿನಿಯಂ ಏಣಿ ಹತ್ತುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ!

ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ನಿವಾಸಿ ನಾರಾಯಣ ನಾಯಕ್ ಪೈಂಟಿಮುಗೇರು ಎಂಬವರು ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಮನೆಯ ಹತ್ತಿರ ಇರುವ ತೆಂಗಿನ ಮರದಲ್ಲಿ ಬೆಳೆದ ಕಾಳು ಮೆಣಸು ಕೀಳಲು ಅಲ್ಯೂಮಿನಿಯಂ ಏಣಿ ಹತ್ತುತ್ತಿದ್ದಾಗ ಜಾರಿ ಏಣಿಯ ಜೊತೆಗೆ ಬಿದ್ದಿದ್ದಾರೆ. ನೆಲಕ್ಕೆ ಬಿದ್ದ ನಾರಾಯಣ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿವೆ, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆ ಬಿದ್ದ ನೋವಿಗೆ ಕೊನೆಯುಸಿರೆಳೆದಿದ್ದಾರೆ.  ಮೃತರು  ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಭಟ್ಕಳದಲ್ಲಿ ಮಹಿಳೆಯರಿಗೆ ಅಶ್ಲೀಲ ಸಂದೇಶ, ಬ್ಲ್ಯಾಕ್‌ಮೇಲ್‌ : ವಿದ್ಯಾರ್ಥಿ ಬಂಧನ

ಭಟ್ಕಳ : ಪ್ರತ್ಯೇಕ ಪ್ರಕರಣದಲ್ಲಿ, ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಬಳಸಿಕೊಂಡು ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸಿ,

ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 19 ವರ್ಷದ ಯುವಕನನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೆಹ್ರಾನ್ ಮೆಹ್ರಾಬ್ ಶಾಬಂದಾರಿ ಎಂದು ಗುರುತಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮಾಂಕಿ ಮೂಲದವರಾಗಿದ್ದು, ಪ್ರಸ್ತುತ ಕುಮಟಾ ತಾಲ್ಲೂಕಿನ ತುಳಸಿ ಕಟ್ಟೆಯಲ್ಲಿ ವಾಸಿಸುತ್ತಿದ್ದ. ಆತ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿಸಿಎ ಕೋರ್ಸ್ ಓದುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಮದುವೆ ಸೇರಿದಂತೆ ವಿವಿಧ ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ, ಅಲ್ಲಿ ಪರಿಚಯವಿಲ್ಲದ ಮಹಿಳೆಯರ ಗುಪ್ತವಾಗಿ ಫೋಟೋ ತೆಗೆದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಬಳಿಕ ಆ ಮಹಿಳೆಯರಿಗೆ ಇಮೇಲ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಆರೋಪಿಯ ಬಳಿ 18 ನಕಲಿ ಇಮೇಲ್ ಐಡಿಗಳು ಇದ್ದವು ಎಂದು ತನಿಖೆಯಿಂದ ತಿಳಿದುಬಂದಿದೆ.

ಮಹಿಳೆಯರಿಗೆ ನಗ್ನ ಚಿತ್ರಗಳನ್ನು ಕಳುಹಿಸುವಂತೆ ಒತ್ತಡ ಹೇರುತ್ತಿದ್ದ ಆರೋಪಿಯು, ಅವರು ನಿರಾಕರಿಸಿದರೆ ಕೊಲೆ ಬೆದರಿಕೆ ಸೇರಿದಂತೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಧಮ್ಮಿ ಹಾಕುತ್ತಿದ್ದ ಈ ವೇಳೆ ಕೆಲವು ಹಿಂದೂ ಧಾರ್ಮಿಕ ನಾಯಕರ ಹೆಸರನ್ನು ಉಲ್ಲೇಖಿಸಿ ಬೆದರಿಕೆ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಭಟ್ಕಳದ ಮಹಿಳೆಯೊಬ್ಬರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತು. ನಂತರ ಪ್ರಕರಣವನ್ನು ಸೈಬರ್ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಬಳಿಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Puttur: Retired headmaster dies after falling from coconut tree-ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 130

You cannot copy content of this page