ಬ್ರೇಕಿಂಗ್ ನ್ಯೂಸ್
ಕರ್ನಾಟಕಕೃಷಿ

ಕೊಡಗು: ರಾಜಾಸೀಟು ಉದ್ಯಾನವನದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ !

ಕೊಡಗು:Tulu Times | ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.

ಪ್ರವಾಸಿಗರ ಸ್ವರ್ಗ, ಮಂಜಿನ ನಗರಿ ಮಡಿಕೇರಿಯ ರಾಜಾಸೀಟು, ಪುಷ್ಪಕಾಶಿಯಂತೆ ಬಣ್ಣ ಬಣ್ಣದ ಹೂಗಳಿಂದ ಕಂಗೊಳಿಸುತ್ತಿದೆ. ಅಲ್ಲಿ ಹೂವಿನ ಲೋಕವೇ ಧರೆಗಿಳಿದು ಬಂದಿದ್ದು, ಆ ಸೌಂದರ್ಯ ಕಣ್ತುಂಬಿಕೊಳ್ಳೋಕೆ ಎರಡು ಕಣ್ಣು ಸಾಲದು. ಲಕ್ಷಾಂತರ ಹೂಗಳಿಂದ ತಲೆಎತ್ತಿರುವ ಕಲಾಕೃತಿಗಳು, ಕಂಗೊಳಿಸುತ್ತಾ ಕೈಬೀಸಿ ಕರೆಯುತ್ತಿರುವ ಆ ಪುಷ್ಪರಾಶಿ, ಮಂಜಿನ ನಗರಿಗೆ ಹೂವಿನ ಹೊದಿಕೆ ಹೊದಿಸಿದಂತೆ ಭಾಸವಾಗಿಸಿದೆ. ಮಂಜಿನನಗರಿ ಮಡಿಕೇರಿಯ ರಾಜಾಸೀಟ್​​​ಗೆ ವಿಶೇಷ ಮೆರುಗುಬಂದಿದೆ.

ವರ್ಷಕ್ಕೊಮ್ಮೆ ಆಗಮಿಸಿಸೋ ಅತಿಥಿಗಳು ಅವ್ರು ಬೇರಾರು ಅಲ್ಲ ಸುವಾಸನೆ ಬೀರುತ್ತಾ, ಪುಷ್ಪರಾಶಿ ಕಂಗೊಳಿಸುತ್ತಿವೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂರ್ತ ಗೌಡ ಉದ್ಘಾಟಿಸಿದರು. ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ 33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾದ ಕೊಡಗಿನ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ನೋಡುಗರನ್ನು ಸೆಳೆಯುತ್ತಿವೆ.

ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ 33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾದ ಕೊಡಗಿನ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ನೋಡುಗರನ್ನು ಸೆಳೆಯುತ್ತಿವೆ.

ಸುಮಾರು 8 ಸಾವಿರ ಕುಂದಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‌ಗಳಲ್ಲಿ ಸುಮಾರು 20 ಸಾವಿರ ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ. ಭಾರತ ಏಕೀಕರಣದ ಸಂಕೇತವಾಗಿ ಕನ್ನಡ ಅಕ್ಷರಗಳ ಕಲಾಕೃತಿ, ತಬಲಾ, ಪಿಯಾನೊ ಹರ್ಪ್, ಗಣರಾಜ್ಯೋತ್ಸವದ ಅಂಗವಾಗಿ ಅಮರ್ ಜವಾನ್, ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಟೈಡರ್ ಮ್ಯಾನ್, ಬ್ಲೂವೇ, ಮಿಕ್ಕಿ ಮೌಸ್, ಡೊರೇಮ್ಯಾನ್ ಕಲಾಕೃತಿಗಳು ಗಮನ ಸೆಳೆಯುತ್ತಿವೆ.

ಒಂದಕ್ಕಿಂತ ಒಂದು ಸುಂದರ ಹೂಗಳು ನಗುತ್ತಾ ಕಂಗೊಳಿಸುತ್ತಿದ್ದರೆ, ಎಲ್ಲವನ್ನೂ ಮರೆತು ಹೂವಿನ ಲೋಕದಲ್ಲಿ ವಿಹರಿಸಿದ ಪ್ರವಾಸಿಗರು ಖುಷಿ ಖುಷಿಯಾಗಿ ಸುತ್ತಾಡುತ್ತಾ ಎಂಜಾಯ್ ಮಾಡಿದ್ರು. ಒಟ್ನಲ್ಲಿ ಇಂದಿನಿಂದ ರಾಜಾಸೀಟ್​​​ನಲ್ಲಿ ಬಿಡುಬಿಟ್ಟಿರೋ ಈ ಪುಷ್ಪರಾಣಿಯರು ಎಲ್ಲರನ್ನು ತನ್ನತ್ತ ಸೆಳೆಯುತ್ತಾ ಚಲುವೆಲ್ಲಾ ತಮ್ಮದೆನ್ನುತ್ತಿವೆ, ಹೂವಿನ ಲೋಕದಲ್ಲಿ ಮೈಮರೆತಿರೋ ಜನರೂ ಕೂಡ ರಾಜಾಸೀಟ್​​​ನ ಸೌಂದರ್ಯ ಸವಿಯುತ್ತಾ ಹೂವಿನ ಅಂದವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

Kodagu: Eye-catching flower display at Rajaseatu Park!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 156

You cannot copy content of this page