ನೆಲ್ಯಾಡಿ: Tulu Times | ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ನೆಲ್ಯಾಡಿ ಲಾವತ್ತಡ್ಕ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜ. 23 ಮಧ್ಯಾಹ್ನ ವೇಗವಾಗಿ ಬಂದ ಬೈಕ್ ಲಾವತ್ತಡ್ಕ ಸಮೀಪ ಸ್ಕಿಡ್ ಆಗಿದೆ. ಅಪಘಾತದ ತೀವ್ರತೆಗೆ ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ಜಾಯ್ (51) ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಪೆರಿಯಶಾಂತಿ ಬಳಿಯ ಲಾವತ್ತಡ್ಕ ಎಂಬಲ್ಲಿ ಶಿರಾಡಿಯ ಜಾಯ್ ತಮ್ಮ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿದೆ. ಹೀಗಾಗಿ, ಬೈಕ್ ಸ್ಕಿಡ್ ಆಗಿದೆ. ಅಪಘಾತದ ತೀವ್ರತೆಗೆ ಬೈಕ್ ಪಲ್ಟಿಯಾಗಿ, ಜಾಯ್ ಅವರ ತಲೆಗೆ ಬಹಳ ಏಟಾಗಿ ರಕ್ತ ಬಂದಿದೆ. ಇದರಿಂದ, ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸುವ ಪ್ರಕ್ರಿಯೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಕಾಮಗಾರಿಗಳು ಆಗಿದ್ದು, ವಾಹನ ಸವಾರರು ಬಹಳ ವೇಗವಾಗಿ ವಾಹನಗಳನ್ನು ಓಡಿಸಿಕೊಂಡು ಬರುತ್ತಾರೆ. ಬೆಂಗಳೂರು ಮಂಗಳೂರು ಕಡೆಯಿಂದ ವಾಹನಗಳು ಓಡಾಟ ನಡೆಸುವ ಸಂದರ್ಭದಲ್ಲಿ ಹಲವಾರು ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ವಾಹನ ಸವಾರರ ಪರದಾಟ!
ಚಾರ್ಮಾಡಿ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಲಾರಿಯೊಂದು ಸಿಲುಕಿದ ಸಿಲುಕಿದ ಪರಿಣಾಮ ಭಾರಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡಿದರು.
ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಭಾರೀ ಪ್ರಮಾಣದಲ್ಲಿ ಸರಕು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ತಿರುವು ಪಡೆದುಕೊಳ್ಳಲು ಸಾಧ್ಯವಾಗದೆ ರಸ್ತೆ ಮಧ್ಯೆ ಬಾಕಿಯಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾತ್ರಿ ಟ್ರಾಫಿಕ್ ಜಾಮ್ ಮುಂದುವರಿತ್ತು. ಲಾರಿ ರಸ್ತೆಯಲ್ಲೇ ನಿಂತ ಕಾರಣ ಘನ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಲಘು ವಾಹನಗಳಿಗೆ ಸಂಚರಿಸುವಷ್ಟು ಜಾಗವಿದ್ದು ಬೇಕಾಬಿಟ್ಟಿಯಾಗಿ ವಾಹನಗಳನ್ನು ನುಗ್ಗಿಸಿದ ಕಾರಣ ಮತ್ತಷ್ಟು ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಹಲವು ತಾಸು ಸಾಲುಗಟ್ಟಿ ನಿಲ್ಲಬೇಕಾಯಿತು. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು ಫಾಟಿ ಭಾಗದಲ್ಲಿ ವಾಹನ ಸಂಚಾರ ದಟ್ಟಣೆಯು ಅಧಿಕಗೊಂಡಿದೆ.
Nelyadi: Biker dies after bike skids- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











