ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಸಿಟಿ ಲೈಫ್‌ ಆಸೆಗೆ ಪ್ರಾಣವನ್ನೇ ಕಳೆದುಕೊಂಡ ಯುವತಿ!

ಕಲಬುರಗಿ:Tulu Times | ಕಲಬುರಗಿ ನಗರದ ಆಜಾದಪುರ್ ಬಡಾವಣೆಯ ನವ ವಿವಾಹಿತೆಯೊಬ್ಬಳು ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.ಮೃತ ಯುವತಿಯನ್ನು ಅನಸೂಯಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:‌ ಹೆಚ್ಚು ಕುಂಬಳಕಾಯಿ ಬೀಜ ಸೇವನೆ ಆರೋಗ್ಯಕ್ಕೆ ಹಾನಿಕಾರಕ: ತಜ್ಞರ ಎಚ್ಚರಿಕೆ

ಹಳ್ಳಿಯ ಜೀವನದಿಂದ ಬೇಸತ್ತ ಹುಡುಗಿ ನೇಣಿಗೆ ಶರಣು!

ತನ್ನ ಅತ್ತೆ ಮಗನ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾಗೆ ಮೂವರು ಸಹೋದರಿಯರಿಗೂ ಇದ್ದರು. ಇವರೆಲ್ಲರೂ ಸಿಟಿಯಲ್ಲಿಯೇ ಇದ್ದರು. ನಂತರ ಅನಸೂಯಗೆ ಹಳ್ಳಿಯ ಜೀವನದಲ್ಲಿ ಬೇಸರ ಆಗಿದೆ. ಹೀಗಾಗಿ ನೊಂದಿದ್ದಳು.  ತಾನು ಮಾತ್ರ ಮದುವೆಯಾಗಿ ಹಳ್ಳಿಯಲ್ಲಿ ಇದ್ದೇನೆ ಎಂಬ ಗಿಲ್ಟಿ ಫೀಲ್ ಬಂದಿದೆ. ಹೀಗಾಗಿ ಮಾನಸಿಕವಾಗಿ ನೊಂದಿದ್ದ ಈಕೆ, ತವರಿಗೆ ಹೋದಾಗಲೂ ವಿಚಾರವನ್ನು ಒಂದೆರಡುಬಾರಿ ಹೇಳಿದ್ದಳು.   ವಿದ್ಯಾಭ್ಯಾಸ ಪಡೆದರೂ ಹಳ್ಳಿಯಲ್ಲಿ ಜೀವನ ನಡೆಸುತ್ತಿರುವ ಕೊರಗಿನ ಬಗ್ಗೆ ಅಲವತ್ತುಕೊಂಡಿದ್ದಳು. ಇದೇ ವಿಚಾರವಾಗಿ ಕೊರಗುತ್ತಿದ್ದ ಆಕೆ ಕೊನೆಗೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ:‌ ಯಡಿಯೂರಪ್ಪರಿಗೆ ಸುನಿಲ್ ಕುಮಾರ್ ರನ್ನು ಹೋಲಿಸುತ್ತಿರುವುದೇಕೆ?

ಅನಸೂಯಾ ಮೊದಲು ಬೆಂಗಳೂರಿನಲ್ಲಿ ಒಂದು ವರ್ಷ ಕೆಲಸ ಮಾಡಿದ್ದಳು. ಹೀಗಾಗಿ ಆಕೆಗೆ ಹಳ್ಳಿ ಜೀವನಇಷ್ಟ ಇರಲಿಲ್ಲ. ಇತ್ತ ಪ್ರೀತಿಸಿದ ಹುಡುಗ ಬಿಡೋಕು ಆಗ್ತಿರಲಿಲ್ಲ. ಮದುವೆ ಬಳಿಕ ಸಿಟಿ ವ್ಯಾಮೋಹ ಈಕೆಯನ್ನು  ಕಾಡತೊಡಗಿದೆ. ಈ ನಡುವೆಯೂ ಕಲಬುರಗಿಯ ಆಜಾದಪುರದಲ್ಲಿರುವ ಗಂಡನ ಮನೆಯಲ್ಲಿ ಇದ್ದಳು.  ನಂತರ ಗಂಡನ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:‌ ಕೊಡಗು: ರಾಜಾಸೀಟು ಉದ್ಯಾನವನದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ !

ಇತ್ತೀಚೆಗೆ ನಗರ ಜೀವನದ ಆಕರ್ಷಣೆಗೆ ಮರುಳಾಗಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆಯುವ ಹಪಾಹಪಿಯಿಂದ ಯುವಜನತೆ ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.  ಇನ್ನು ನಗರದ ಐಷಾರಾಮಿ ಜೀವನಕ್ಕೆ ಹೊಂದಿಕೊಳ್ಳಲು ಹೋಗಿ ಸಾಲದ ಸುಳಿಗೆ ಸಿಲುಕುವುದು ಅಥವಾ ತಪ್ಪು ದಾರಿ ಹಿಡಿದು ಮಾನಸಿಕ ಒತ್ತಡದಿಂದ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಳ್ಳುವುದು.

A young woman lost her life for the desire for city life!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page