ಕರ್ನಾಟಕ: Tulu Times | ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಗಣರಾಜ್ಯೋತ್ಸವದ ದಿನ ಜನತೆಗೆ 77ನೇ ವರ್ಷದ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿ, ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಗಣರಾಜ್ಯೋತ್ಸವ ಎಂದರೆ ಭಾರತದ ಸ್ವಾಭಿಮಾನದ ದಿನ. ಜನವರಿ 26 ಸಂವಿಧಾನವನ್ನು ಅನುಷ್ಠಾನಕ್ಕೆ ತಂದ ದಿನ. ಭಾರತದ ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ. ಸ್ವಾತಂತ್ರ್ಯ ನಂತರ ಈ ದೇಶದ 570 ಕ್ಕೂ ಹೆಚ್ಚು ಪ್ರದೇಶಗಳು ರಾಜರ ಆಡಳಿತಕ್ಕೆ ಒಳಪಟ್ಟಿದ್ದವು. ಇದೆಲ್ಲವನ್ನು ಒಗ್ಗೂಡಿಸಿ ಈ ದೇಶವನ್ನು ಒಂದು ಮಾಡಲಾಯಿತು. ಭಾರತವು ರಾಜ್ಯಗಳ ಒಕ್ಕೂಟ ಎಂಬುದನ್ನು ಸಂವಿಧಾನದ 1ನೇ ವಿಧಿಯು ಹೇಳುತ್ತದೆ. ದೇಶದ ಸಂವಿಧಾನದ ಪಿತಾಮಹಾರಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದಾರೆ.
ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣವೇ ಸಂವಿಧಾನ ಹಾಗೂ ಸರ್ಕಾರದ ಆಶಯ. ಸಂವಿಧಾನವೇ ನಮ್ಮ ಧರ್ಮ. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ. ಎಲ್ಲಾ ಗಣಗಳಿಗೆ ಆ ಕೈಲಾಸದ ಶಿವ ಅಧಿಪತಿ. ನಮ್ಮ ದೇಶದ ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ. ಉಸಿರಾಡಲು ಗಾಳಿ ಬೇಕು. ನಮ್ಮ ದೇಶ ನಡೆಸೋಕೆ ಸಂವಿಧಾನ ಬೇಕು. ಸಂವಿಧಾನವೇ ನಮ್ಮ ಪ್ರಜಾಪ್ರಭುತ್ವದ ಆತ್ಮ. ಸಂವಿಧಾನವೇ ನಮ್ಮ ದೇಶದ ಶಕ್ತಿ. ಇವನಾರವ, ಇವನಾರವ ಎನ್ನುವ ಭೇದ-ಭಾವ ಅಳಿಸಿ, ಇವ ನಮ್ಮವ, ಇವ ನಮ್ಮವ ಎನ್ನುವ ಭಾವನೆ ಮೂಡಿಸಿದ್ದೇ ಸಂವಿಧಾನ. ಸಂವಿಧಾನದ ಆರ್ಟಿಕಲ್ 14 ಮತ್ತು 18 ಸಮಾನತೆ ಬಗ್ಗೆ ಹೇಳುತ್ತದೆ. ಆರ್ಟಿಕಲ್ 17 ಅಸ್ಪೃಶ್ಯತೆ ಆಚರಿಸುವುದು ಅಪರಾಧ ಎಂದು ಹೇಳುತ್ತದೆ. 19 (1) (A) ಈ ಆರ್ಟಿಕಲ್ freedom of speech ಬಗ್ಗೆ ಹೇಳುತ್ತದೆ. 21 A ಶಿಕ್ಷಣದ ಹಕ್ಕಿನ ಬಗ್ಗೆ ಹೇಳುತ್ತದೆ. ಇವು ಉದಾಹರಣೆ ಮಾತ್ರ. ಸಂವಿಧಾನದ ಪ್ರತಿ ಪುಟದಲ್ಲೂ ಜನಪರ ವಿಚಾರಗಳು ಇವೆ.
ಜಾತಿ, ಧರ್ಮ, ಸಂಪತ್ತು, ಅಧಿಕಾರ ಯಾವುದೂ ಇಲ್ಲಿ ಲೆಕ್ಕಕ್ಕೆ ಬರುವುದಿಲ್ಲ. ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಸಂವಿಧಾನ ಹೇಳುತ್ತದೆ. 75 ವರ್ಷಗಳ ಹಿಂದೆ ಬಡತನ, ಅನಕ್ಷರತೆ, ಹಸಿವು, ಅಪೌಷ್ಟಿಕತೆ ಸಮಸ್ಯೆಗಳು ದೇಶವನ್ನು ಬಹಳವಾಗಿ ಕಾಡಿತ್ತು. ಆದರೆ ಈಗ ಚಿತ್ರಣ ಸಂಪೂರ್ಣ ಬದಲಾಗಿದೆ. ನಮ್ಮ ಪಕ್ಷ ಹಾಗೂ ಸರ್ಕಾರ ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಕಲ್ಪಿಸಿದೆ. ಹಿಂದೆ ನಮ್ಮನ್ನು ಕಾಡುತ್ತಿದ್ದ ಎಲ್ಲ ಸಮಸ್ಯೆಗಳನ್ನು ಮೆಟ್ಟಿನಿಲ್ಲುವ ತಾಕತ್ತು ಹೊಂದಿದ್ದೇವೆ. ವಿಶ್ವ ಮಟ್ಟದಲ್ಲಿ ಭಾರತದ ವರ್ಚಸ್ಸನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಇದೆಲ್ಲವೂ ಸಾಧ್ಯವಾಗಿದ್ದು ಸಂವಿಧಾನದ ಅಂಶಗಳ ಸಮರ್ಪಕ ಜಾರಿಯಿಂದ. ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ: ಡಾ. ಅಂಬೇಡ್ಕರ್ ಅವರು ರಚಿಸಿದ ಶಕ್ತಿಶಾಲಿ ಸಂವಿಧಾನ ವಿಶ್ವಕ್ಕೆ ಮಾದರಿಯಾದುದು ಎಂದರು.
We have taken India’s image to the next level at the global level: DK Shivakumar- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











