ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು

ಬೆಳ್ತಂಗಡಿ:Tulu Times | ಬೆಳ್ತಂಗಡಿಯ ಮಡಂತ್ಯಾರಿನಲ್ಲಿ  ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾತ್ರಿ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಹೋಗುತ್ತಿದ್ದಾಗ ನಡೆದ ಘಟನೆ!

ಜ. 24ರಂದು ರಾತ್ರಿ ಘಟನೆ ನಡೆದಿದ್ದು,  ಮೃತ ವ್ಯಕ್ತಿ ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ(45).
ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.   ಇವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಾತ್ರಿ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಸುಮಾರು 11.30ರ ವೇಳೆ ಬರುತ್ತಿದ್ದಾಗ ಮಡಂತ್ಯಾರು ಸಮೀಪ ಮಂಗಳೂರಿನಿಂದ ಬರುತ್ತಿದ್ದ ಕಾರು ಅವರು ಸಂಚರಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.  ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು: ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ

ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ,ದ.ಕ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.

ಘಟನೆ ನಡೆದದ್ದೇನು..?

ಕೌಟುಂಬಿಕ ಕಲಹದಲ್ಲಿ ಮನೆಯಲ್ಲಿ ಸಂಘರ್ಷ ನಡೆದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದಿದೆ ಎಂಬ ಮಾಹಿತಿ ಇತ್ತು. ಈ ವೇಳೆ ಕೋವಿಯಿಂದ ಗುಂಡು ಹಾರಿದ್ದು, ಗುಂಡು ತಗುಲಿ ಬಾಲಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.

ಬಾಲಕನೇ ಶೂಟ್ ಮಾಡಿಕೊಂಡಿದ್ದಾ ಅಥವಾ ತಂದೆಯೇ ಶೂಟ್ ಮಾಡಿದ್ದಾ ಎಂಬ ಬಗ್ಗೆ ಅನುಮಾನ ಮೂಡಿದೆ, ಗಲಾಟೆಯಲ್ಲಿ ತಂದೆ ವಸಂತ್ ಅಮೀನ್ ಗೂ ಚೂರಿ ಇರಿತದ ಗಾಯವಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಕ ಮೋಕ್ಷ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ. ಬಾಲಕನ ಸಾವಿಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ ಕಡಬ ಠಾಣೆ ಪೊಲೀಸರಿಂದ ಘಟನೆ ನಡೆದ ಸ್ಥಳದಲ್ಲಿ ತೀವ್ರ ತನಿಖೆ ನಡೆಯುತ್ತಿದೆ.

Belthangady: Scooter rider dies after being hit by car- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 158

You cannot copy content of this page