ಬ್ರೇಕಿಂಗ್ ನ್ಯೂಸ್
ಕರ್ನಾಟಕಸುಳ್ಯ

ಸುಳ್ಯದ ಪಯಸ್ವಿನಿ ನದಿಯಲ್ಲಿ ಶವ ಪತ್ತೆ

ಸುಳ್ಯ: Tulu Times | ಓಡಬಾಯಿ ಎಂಬಲ್ಲಿ ಪಯಸ್ಸಿನಿ ನದಿಯಲ್ಲಿ ವ್ಯದ್ಯರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ  ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ನಾಯ್ಕ (70) ಎನ್ನಲಾಗಿದೆ. ಇವರು ದೊಡೇರಿ ನಿವಾಸಿ ಆಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಹೆಚ್ಚಿನ ಮಾಹಿತಿ  ಇನ್ನಷ್ಟೇ ತಿಳಿದು ಬರಬೇಕಿದೆ.

ಕಳೆದ ವರ್ಷಗಳಲ್ಲಿ ಕೂಡ ಪಯಸ್ವಿನಿ ನದಿಯ ಕಲ್ಮಕಾರು ಮತ್ತು ಇತರ ಭಾಗಗಳಲ್ಲಿ ಸ್ನಾನಕ್ಕೆ ಹೋದ ಯಾತ್ರಿಕರು ಮತ್ತು ಯುವಕರು ನೀರಿನ ಸುಳಿಗೆ ಸಿಲುಕಿ ಮೃತಪಟ್ಟ ಹಲವಾರು ಘಟನೆಗಳು ನಡೆದಿವೆ. ನದಿಯ ಕೆಲವು ಭಾಗಗಳಲ್ಲಿ ನೀರಿನ ಆಳ ಮತ್ತು ಸುಳಿ ಹೆಚ್ಚಿರುವುದರಿಂದ, ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು

ಬೆಳ್ತಂಗಡಿ:ಪ್ರತ್ಯೇಕ ಪ್ರಕರಣದಲ್ಲಿ,ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾತ್ರಿ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಹೋಗುತ್ತಿದ್ದಾಗ ನಡೆದ ಘಟನೆ!

ಜ. 24ರಂದು ರಾತ್ರಿ ಘಟನೆ ನಡೆದಿದ್ದು, ಮೃತ ವ್ಯಕ್ತಿ ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ(45). ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ. ಇವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್ ಕೆಲಸ ಮಾಡುತ್ತಿದ್ದು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಾತ್ರಿ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಸುಮಾರು 11.30ರ ವೇಳೆ ಬರುತ್ತಿದ್ದಾಗ ಮಡಂತ್ಯಾರು ಸಮೀವ ಮಂಗಳೂರಿನಿಂದ ಬರುತ್ತಿದ್ದ ಕಾರು ಅವರು ಸಂಚರಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಾಯಿಕುಮಾರ್ ಅಭಿಮಾನಿಯಿಂದ “ಘಾರ್ಗಾ” ಟ್ರೈಲರ್ ಬಿಡುಗಡೆ…!

 

ಮಂಗಳೂರು: ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ

ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿದ.ಕ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.

ಘಟನೆ ನಡೆದದ್ದೇನು..?

ಕೌಟುಂಬಿಕ ಕಲಹದಲ್ಲಿ ಮನೆಯಲ್ಲಿ ಸಂಘರ್ಷ ನಡೆದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದಿದೆ ಎಂಬ ಮಾಹಿತಿ ಇತ್ತು. ಈ ವೇಳೆ ಕೋವಿಯಿಂದ ಗುಂಡು ಹಾರಿದ್ದು, ಗುಂಡು ತಗುಲಿ ಬಾಲಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.

Body found in Payaswini river in Sullia- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page