ಬ್ರೇಕಿಂಗ್ ನ್ಯೂಸ್
ಕರ್ನಾಟಕದೇಶ

ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ!

ಮಹಾರಾಷ್ಟ್ರ: Tulu Times |‌ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ದುರ್ಮರಣವಾಗಿದ್ದಾರೆ.

ವಿಮಾನ ಪತನ ಹೇಗಾಯ್ತ..?
ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳ ಪ್ರಕಾರ, ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿವೆ. ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎನ್ನಲಾಗಿದೆ. ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ವಿಮಾನ  ಪತನಗೊಂಡಿದೆ. ಘಟನಾ ಸ್ಥಳದಿಂದ ಹೊರಬಂದಿರುವ ವಿಡಿಯೋಗಳು ಎದೆನಡುಗಿಸುವಂತಿವೆ. ವಿಮಾನವು ನಜ್ಜುಗುಜ್ಜಾಗಿ ಹರಿದು ಹಂಚಿಹೋಗಿದೆ. ಸುತ್ತಲೂ ದಟ್ಟವಾದ ಹೊಗೆ ಆವರಿಸಿದ್ದು, ವಿಮಾನದಲ್ಲಿದ್ದವರ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಅಜಿತ್ ಪವಾರ್ ರಾಜಕೀಯ ಜೀವನ ಹೇಗಿತ್ತು..?

ತಮ್ಮ ಚಿಕ್ಕಪ್ಪ ಶರದ್ ಪವಾರ್ ಮಾರ್ಗದರ್ಶನದಲ್ಲಿ ರಾಜಕೀಯಕ್ಕೆ ಕಾಲಿಟ್ಟ ಅಜಿತ್, 1982 ರಲ್ಲಿ ‘ಸಕ್ಕರೆ ಸಹಕಾರಿ ಸಂಘ’ದ ಮೂಲಕ ಸಾರ್ವಜನಿಕ ಜೀವನ ಆರಂಭಿಸಿದರು. ಪಶ್ಚಿಮ ಮಹಾರಾಷ್ಟ್ರದ ಸಹಕಾರಿ ಸಂಸ್ಥೆಗಳು, ಹಾಲು ಒಕ್ಕೂಟಗಳು ಮತ್ತು ಬ್ಯಾಂಕುಗಳ ಮೂಲಕ ತಳಮಟ್ಟದಲ್ಲಿ ಬಲಿಷ್ಠ ನೆಟ್‌ವರ್ಕ್ ಸ್ಥಾಪಿಸಿ ಮೇಲ್ಮಟ್ಟಕ್ಕೆ ಬಂದರು. ಮೊದಲ ಬಾರಿಗೆ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಶರದ್ ಪವಾರ್ ಕೇಂದ್ರದಲ್ಲಿ ರಕ್ಷಣಾ ಸಚಿವರಾದಾಗ, ಅಜಿತ್ ಅವರು ಆ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜ್ಯ ರಾಜಕಾರಣಕ್ಕೆ ಮರಳಿದರು. ಅದೇ ವರ್ಷ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಅವರು, ಅಲ್ಲಿಂದ ಸತತ ಮೂರು ದಶಕಗಳ ಕಾಲ ಅದೇ ಕ್ಷೇತ್ರವನ್ನು ಪ್ರತಿನಿಧಿಸಿ ದಾಖಲೆ ಬರೆದಿದ್ದರು.

 ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ !

ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ಅವರು ಸಂತಾಪ ಸೂಚಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಧೈರ್ಯ ಮತ್ತು ಶಕ್ತಿಯನ್ನ ನೀಡುವಂತೆ ಮೋದಿ ಪ್ರಾರ್ಥಿಸಿದ್ದಾರೆ.

Maharashtra DCM Ajit Pawar dies in plane crash!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 170

You cannot copy content of this page