ಬೆಂಗಳೂರು : Tulu Times l ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಮಹತ್ವದ ಕಾನೂನು ರಿಲೀಫ್ ದೊರೆತಿದೆ. ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಗೆ ನಿಯೋಜಿತ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ವರದಿಯನ್ನು ಸ್ವೀಕರಿಸಿದೆ.
ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ;
ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಮಾವ ಮಲ್ಲಿಕಾರ್ಜುನಸ್ವಾಮಿ ಹಾಗೂ ಭೂಮಾಲೀಕ ದೇವರಾಜು ವಿರುದ್ಧ ತನಿಖೆ ಮುಂದುವರಿಸಲು ಯಾವುದೇ ಸಾಕ್ಷ್ಯಾಧಾರ ದೊರಕಿಲ್ಲ ಎಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ವರದಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ಆದರೆ, ಪ್ರಕರಣದಲ್ಲಿರುವ ಇತರ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಿ ಅಂತಿಮ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಜನಪ್ರತಿನಿಧಿಗಳ ವಿರುದ್ಧದ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಈ ಆದೇಶ ನೀಡಿದ್ದು, ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಕೃಷ್ಣ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಅವರು ‘ಬಿ’ ವರದಿ ಅಪೂರ್ಣವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ನ್ಯಾಯಾಲಯವು, ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಲು ತಕ್ಕಷ್ಟು ಪುರಾವೆ ದೊರಕಿಲ್ಲ ಎಂದು ಅಭಿಪ್ರಾಯಪಟ್ಟು, ಅವರ ಕುರಿತಂತೆ ‘ಬಿ’ ವರದಿ ಸ್ವೀಕರಿಸಿದೆ. ಇದೀಗ ನ್ಯಾಯಾಲಯದ ಈ ಆದೇಶದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಮುಡಾ ಹಗರಣ ಪ್ರಕರಣದಲ್ಲಿ ಪರಿಹಾರ ದೊರೆತಿದೆ ಎಂದು ಹೇಳಲಾಗಿದೆ.
Mooda scam: Big relief for CM Siddaramaiah and family – ತುಳು ಟೈಮ್ಸ್
ಇದನ್ನೂ ಓದಿ : ರಷ್ಯಾ ಕಚ್ಚಾ ತೈಲ ನಿಷೇಧದ ಪರಿಣಾಮ : ಯುರೋಪ್ ಬದಲು ಪಶ್ಚಿಮ ಆಫ್ರಿಕಾಗೆ ಭಾರತದ ಡೀಸೆಲ್ ರಫ್ತು ಹೆಚ್ಚಳ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/yx1fqcpWfnc?si=hpij495tpOn7uys6











