ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ : ಸಂಪಾಜೆಯಲ್ಲಿ ಅಪಘಾತ; ಆಟೋ ಚಾಲಕ ಸ್ಥಳದಲ್ಲೇ ಸಾವು

ಸಂಪಾಜೆ : Tulu Times | ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಚೆಡಾವು ರಸ್ತೆಯಲ್ಲಿ ಗುರುವಾರ ನಡೆದ ಹಿಟ್‌ ಅಂಡ್‌ ರನ್‌ ಪ್ರಕರಣವು ಭೀಕರ ಸರಣಿ ಅಪಘಾತಕ್ಕೆ ಕಾರಣವಾಗಿ, ಆಟೋ ರಿಕ್ಷಾ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಸಂಪಾಜೆ ಗೇಟ್‌ನಿಂದ ಚೆಡಾವು ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾವನ್ನು, ಹಿಂದೆಯಿಂದ ವೇಗವಾಗಿ ಬಂದ ಕಾರೊಂದು ಸಂಪಾಜೆ ಪೆಟ್ರೋಲ್ ಬಂಕ್‌ ಸಮೀಪದ ತಿರುವಿನಲ್ಲಿ ಡಿಕ್ಕಿ ಹೊಡೆದು ನಿಲ್ಲಿಸದೇ ಮಡಿಕೇರಿ ಕಡೆಗೆ ಪರಾರಿಯಾಗಿದೆ. ಡಿಕ್ಕಿಯ ತೀವ್ರತೆಯಿಂದ ಆಟೋ ಪಲ್ಟಿಯಾಗಿ, ಗಂಭೀರ ಗಾಯಗೊಂಡ ಚಾಲಕರು ರಸ್ತೆಗೆ ಬಿದ್ದಿದ್ದಾರೆ. ಈ ಸಂದರ್ಭ ಎದುರು ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್‌ ಲಾರಿಯ ಚಕ್ರಗಳ ಕೆಳಗೆ ಆಟೋ ಚಾಲಕರು ಸಿಲುಕಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸುಂದರ ಚಿಟ್ಟಿಕ್ಕಾನ (56) ಎಂದು ಗುರುತಿಸಲಾಗಿದೆ. ಅವರು ದಿವಂಗತ ರಾಮಣ್ಣ ಗೌಡ ಅವರ ಪುತ್ರರಾಗಿದ್ದಾರೆ. ಅಪಘಾತದಲ್ಲಿ ಆಟೋದಲ್ಲಿದ್ದ ಇನ್ನೊಬ್ಬ ಪ್ರಯಾಣಿಕನಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಂದರ ಚಿಟ್ಟಿಕ್ಕಾನ ಅವರು ಈ ಹಿಂದೆ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉಪಾಧ್ಯಕ್ಷರಾಗಿದ್ದು, ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿದ್ದರು. ಅಪಘಾತದ ವೇಳೆ ಅವರು ಗ್ರಾಮ ಪಂಚಾಯತ್ ಸದಸ್ಯೆ ಅನಿತಾ ಅವರ ತಾಯಿ ಪದ್ಮಾವತಿ ಅವರನ್ನು ಸಂಪಾಜೆಯಿಂದ ಚೆಡಾವು ಸಮೀಪದ ನಿವಾಸಕ್ಕೆ ಕರೆದೊಯ್ಯುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಕಾರಿನ ಪತ್ತೆಯಾಗಿರುವುದು ವರದಿಯಾಗಿದೆ.

Sullia: Accident in Sampaje; Auto driver dies on the spot – ತುಳು ಟೈಮ್ಸ್

ಇದನ್ನೂ ಓದಿ : ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/yyHI_WJ6OnU?si=T-3ZJ4R-wWFxpMEN

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 6

You cannot copy content of this page