ಬೆಳ್ತಂಗಡಿ: Tulu Times |ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬಾಲಕೃಷ್ಣ ಗೌಡ ಎಂಬವರ ಮನೆಯಲ್ಲಿ ಬೆಳಗ್ಗೆ, 9:30 ರಿಂದ ಸಂಜೆ 4 ಗಂಟೆ ಒಳಗಡೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಒಟ್ಟು 47,500 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮನೆಯ ಒಳಗೆ ಬೀರುವಿನಲ್ಲಿ ಇಟ್ಟಿದ್ದ 4 ಗ್ರಾಂ ಕಿವಿಯೋಲೆ, 2 ಸಾವಿರ ಮೌಲ್ಯದ 2 ಜೊತೆ ಬೆಳ್ಳಿಯ ಕಾಲುಗೆಜ್ಜೆ, 5,500 ರೂಪಾಯಿ ನಗದು ಕದ್ದೊಯ್ದಿದ್ದಾರೆ.ಈ ಬಗ್ಗೆ ಮನೆಯ ಮಾಲಿಕ ಬಾಲಕೃಷ್ಣ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿಎಸ್, ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರ ಮತ್ತು ತಂಡ, ಮಂಗಳೂರು ಬೆರಳಚ್ಚು ತಜ್ಞರು, ಪುತ್ತೂರು ಸೊಕೋ ತಂಡ, ಮಂಗಳೂರು ಶ್ಯಾನ ದಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಮಡಿಕೇರಿಯ ರಾಸಲೀಲೆ ಕೇಸ್…ಯುವಕ ಅರೆಸ್ಟ್!
ಮಡಿಕೇರಿ: ಪ್ರತ್ಯೇಕ ಪ್ರಕರಣದಲ್ಲಿ, ಬೆಂಗಳೂರಿನ ಸಂಪಿಗೆಹಳ್ಳಿಯ ಯನಪೋಯ ಕಾಲೇಜಿನಲ್ಲಿ ಬಿಬಿಎಂ ವಿದ್ಯಾರ್ಥಿ ಮಡಿಕೇರಿಯ ಯುವಕನೊಬ್ಬನ ರಾಸಲೀಲೆ ಪ್ರಕರಣ ಜಿಲ್ಲೆಯಲ್ಲಿ ವೈರಲ್ ಆಗುತ್ತಿದ್ದು, ಇದೀಗ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಈತ ರಾಜಕಾರಣಿಗಳ ಪುತ್ರಿಯರು ಸೇರಿ ಹಲವರ ಜೊತೆ ಸರಸವಾಡಿರುವ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕೊಡಗಿನ ರಾಸಲೀಲೆ ಪ್ರಕರಣ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. ಈತನ ಹೆಸರು ಮೊಹಮ್ಮದ್ ಸವದ್ ಎಂದು ಗುರುತಿಸಲಾಗಿದ್ದು, ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಯುವಕ ಎಂದು ತಿಳಿದುಬಂದಿದೆ.
ಈತ ಹಲವು ಯುವತಿಯರನ್ನು ಕರೆದೊಯ್ದು ರಾಸಲೀಲೆ ನಡೆಸುತ್ತಿದ್ದ ಎನ್ನಲಾಗಿದೆ. ನಂತರ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದ ಎನ್ನಲಾಗಿದೆ. ವೈರಲ್ ಆದ ವೀಡಿಯೋಗಳಲ್ಲಿ ಕೆಲ ಯುವತಿಯರು ಅನ್ಯಧರ್ಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಕೆಲವರು ಜಿಲ್ಲಾ ಮಟ್ಟಡ ರಾಜಕೀಯ ಪಕ್ಷದ ಮುಖಂಡರ ಪುತ್ರಿಯರು ಇದ್ದಾರೆ ಎಂಬ ಆರೋಪವಿದೆ. ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆ, ಆರೋಪಿ ಮೊಹಮ್ಮದ್ ಸವದ್ ನನ್ನು ಬಂಧಿಸಿದ್ದಾರೆ.
Belthangady: Thieves broke into a house and stole gold jewelry!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











