ಉಜಿರೆ: Tulu Times | ಜ. 31 ರಂದು ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಇದನ್ನೂ ಓದಿ: ಲ್ಯಾಂಡ್ ಲಾರ್ಡ್’ ಜಾಥಾ: ವಿಜಯ್ ಬೆನ್ನಿಗೆ ನಿಂದ ವಿದ್ಯಾರ್ಥಿಗಳು
ಈ ವೇಳೆ ಸಾಕ್ಷ್ಯ ಚಿತ್ರದ ಬಿಡುಗಡೆಯನ್ನು ಕ್ಷೇಮವನ, ಬೆಂಗಳೂರು ಇದರ ಕಾರ್ಯನಿರ್ವಹಕ ನಿರ್ದೇಶಕ ಶ್ರದ್ಧಾ ಅಮಿತ್ ಮಾಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ, ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಮರಾದ ಡಾ. ಭಾಸ್ಕರ ಹೆಗಡೆ ಉಪಸ್ಥಿತರಿರುವರು. ಜನವರಿ 31, ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಉಜಿರೆಯ ಇಂದ್ರಪ್ರಸ್ತ ಸಭಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ: ಅಮೃತ-ಅಂಜನ್ ಗೆ ಯಶ್ ಕಡೆಯಿಂದ ವಿಶ್ ಚಿತ್ರತಂಡ ಫುಲ್ ಖುಷಿ..!
ಇಂದಿನಿಂದ ಅಮೆಜಾನ್ ಪ್ರೈಮ್ ನಲ್ಲಿ ಸಿಂಪಲ್ ಸುನಿ ‘ಗತವೈಭವ’
ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ, ಹೊಸ ಹೀರೋ ದುಷ್ಯಂತ್ ನಾಯಕನಾಗಿ ಹಾಗೂ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿರುವ ಗತವೈಭವ ಸಿನಿಮಾವೀಗ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಇಂದಿನಿಂದ ಅಮೆಜಾನ್ ಪ್ರೈಮ್ ನಲ್ಲಿ ಗತವೈಭವ ಸ್ಟ್ರೀಮಿಂಗ್ ಆಗ್ತಿದೆ.
ಕಳೆದ ವರ್ಷ ನವೆಂಬರ್ 14ರಂದು ತೆರೆಕಂಡ ಈ ಚಿತ್ರದ ಮೂಲಕ ಸುನಿ ನಾಲ್ಕು ವಿಭಿನ್ನ ಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸಿದ್ದರು. ದುಷ್ಯಂತ್ ಚೊಚ್ಚಲ ಸಿನಿಮಾದಲ್ಲಿ ಪಳಗಿದ ನಾಯಕನಂತೆ ಅಭಿನಯಿಸಿ ಸಿನಿಪ್ರಿಯರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಸಿಂಪಲ್ ಸುನಿ ಗತವೈಭವ ಸಿನಿಮಾಗೆ ಕಥೆ-ಚಿತ್ರಕಥೆ ಜೊತೆಗೆ ಸಂಭಾಷಣೆ ಕೂಡ ಬರೆದಿದ್ದಾರೆ. ಸುನಿ ಸಿನಿಮಾಸ್ ಸಂಸ್ಥೆಯಲ್ಲಿ ದೀಪಿಕ್ ಹಾಗೂ ಸುನಿ ಇಬ್ಬರೂ ಸೇರಿ ನಿರ್ಮಾಣ ಮಾಡಿದ್ದಾರೆ. ವಿಲಿಯಂ ಡೇವಿಡ್ ಕ್ಯಾಮೆರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











