ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ಬ್ರೇಕ್

ಕರ್ನಾಟಕ: Tulu Times | ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ಬ್ರೇಕ್ ಹಾಕಲಾಗಿದ್ದು, ಸಾರಿಗೆ ಸಚಿವರಿಂದ ಮಹತ್ವದ ಆದೇಶ  ಹೊರಡಿಸಲಾಗಿದೆ.

ಪ್ರತಿಯೊಂದು ಸರ್ಕಾರಿ ಬಸ್​​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಹೀಗಾಗಿ ಜಾಹೀರಾತು ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದಿದ್ದವು.  ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕೆಲವು ಬಸ್‌ಗಳ ಮೇಲಿದ್ದ ಜಾಹೀರಾತುಗಳನ್ನು ಜನರು ಕಿತ್ತು ಹಾಕಿದ್ದ ಘಟನೆಗಳು ನಡೆದಿದ್ದವು.

ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್​​​ಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಲಾಗಿದೆ.

ಇನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್​​ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ  ಸೂಚಿಸಿದ್ದಾರೆ.

ಕರ್ನಾಟಕದಲ್ಲಿ ಆಘಾತಕಾರಿ ಘಟನೆ: ಸರ್ಕಾರಿ ಶಾಲೆಯಲ್ಲಿ ತೆರೆದ ಚರಂಡಿ ಬಳಿ ಮಕ್ಕಳು

ಬಾಗಲಕೋಟೆ : ಕರ್ನಾಟಕದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಮಕ್ಕಳಿಗೆ ಎದುರಾಗಿರುವ ಮೂಲಸೌಕರ್ಯ ಕೊರತೆಯನ್ನು ಬಹಿರಂಗಪಡಿಸುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಬಾಳ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಬಂದಿರುವ ಫೋಟೋ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಚಿತ್ರದಲ್ಲಿ, ಶಾಲಾ ಮಕ್ಕಳು ಮಧ್ಯಾಹ್ನದ ಊಟ ಸೇವಿಸಿದ ಬಳಿಕ ತಮ್ಮ ತಟ್ಟೆಗಳನ್ನು ತೆರೆದ ಚರಂಡಿಯ ಪಕ್ಕದಲ್ಲಿ ಪೈಪ್‌ನಿಂದ ಹರಿಯುವ ನೀರನ್ನು ಬಳಸಿಕೊಂಡು ತೊಳೆಯುತ್ತಿರುವುದು ಕಂಡುಬಂದಿದೆ. ಈ ದೃಶ್ಯಗಳು ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಗಂಭೀರ ಆತಂಕವನ್ನು ಹುಟ್ಟುಹಾಕಿವೆ. ಸರ್ಕಾರಿ ಶಾಲೆಗಳ ಸುಧಾರಣೆಗೆ ವಿವಿಧ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಆಡಳಿತದ ಹೇಳಿಕೆಗಳ ನಡುವೆಯೇ, ಈ ಘಟನೆ ಅನೇಕ ಗ್ರಾಮೀಣ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳೇ ಇಲ್ಲದಿರುವ ವಾಸ್ತವ ಸ್ಥಿತಿಯನ್ನು ಬಹಿರಂಗಪಡಿಸಿದೆ. ಸುರಕ್ಷಿತ ಕೈತೊಳೆಯುವ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯಗಳ ಕೊರತೆಯಿಂದ ಮಕ್ಕಳು ಆರೋಗ್ಯಕರ ಸ್ವಚ್ಛತಾ ನಿಯಮಗಳನ್ನು ಪಾಲಿಸಲು ಸಾಧ್ಯವಾಗುತ್ತಿಲ್ಲ ಎಂದು ಪೋಷಕರು ಹಾಗೂ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ban on tobacco product advertising in KSRTC buses- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:‌ https://www.youtube.com/@tulutimess

 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 152

You cannot copy content of this page