ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಸುಳ್ಯದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಸುಳ್ಯ: Tulu Times |ಕಡಬ ತಾಲೂಕಿನ ಹುಾರು ಎಂಬಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕುದ್ಮಾರು ಗ್ರಾಮದ ನಿವಾಸಿ ಬಾಬು ಗೌಡ (46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇದರ ಜೊತೆಗೆ  ಗ್ಯಾಸ್ಟಿಕ್ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ಇದಕ್ಕೆ ಸೂಕ್ತ ಚಿಕಿತ್ಸೆ, ಕೊಡಿಸಿದರೂ ಫಲಕಾರಿಯಾಗದೇ ಇದ್ದದ್ದರಿಂದ ಮಾನಸಿಕವಾಗಿ ನೊಂದಿದ್ದರು.  ಹೀಗಾಗಿ ವಿಪರೀತ ನೋವಿನಲ್ಲಿದ್ದ ಇವರು  ಮನೆಯಲ್ಲಿ ಯಾರೂ ಇಲ್ಲದ ವೇಳೆ, ಸ್ನಾನದ ಕೋಣೆಯ ಮಾಡಿನ ಕಬ್ಬಿಣದ ರಾಣಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ಸುನಂದಾ (42)  ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪುತ್ತೂರು: ಕೋಳಿ ಅಂಕಕ್ಕಾಗಿ ಬೃಹತ್ ಹೋರಾಟ !

ಪುತ್ತೂರು: ಪ್ರತ್ಯೇಕ ಪ್ರಕರಣದಲ್ಲಿ, ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಬೃಹತ್ ಹೋರಾಟ ನಡೆಯಲಿದ್ದು ಫೆ.1ರಂದು ಸಮಾಲೋಚನಾ ಸಭೆ ನಡೆಯಲಿದೆ.

ಸಾಂಪ್ರದಾಯಿಕ ಕೋಳಿ ಅಂಕ ಉಳಿಸುವ ನಿಟ್ಟಿನಲ್ಲಿ ಹೋರಾಟಗಾರರು ಮುಂದಾಗಿದ್ದು, ಫೆಬ್ರವರಿ 1 ರಂದು ಪುತ್ತೂರಿನಲ್ಲಿ ಬೃಹತ್ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಈ ಬಾರಿ ಸಾಂಪ್ರದಾಯಿಕ ಕೋಳಿ ಅಂಕಗಳನ್ನು ನಡೆಸದಂತೆ ತಡೆದಿದ್ದಾರೆ. ಹಾಗಾಗಿ ಬೃಹತ್ ಹೋರಾಟ ನಡೆಸಲು ಯೋಚಿಸಲಾಗಿದೆ.

ಹೀಗಾಗಿ, ಫೆಬ್ರವರಿ 1ರಂದು ಪುತ್ತೂರಿನಲ್ಲಿ ‘ಕೋಳಿ ಅಂಕ’ಕ್ಕಾಗಿ ಕೊಟ್ರೇಚಾ ಹಾಲ್ ನಲ್ಲಿ ಬೃಹತ್ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕೋಳಿ ಅಂಕ ಅಭಿಮಾನಿಗಳು ಹಾಗೂ ದೈವಾರಾಧನೆಗೆ ಸಂಬಂಧಪಟ್ಟವರು ಭಾಗವಹಿಸಲಿದ್ದಾರೆ.

ಕರಾವಳಿಯಲ್ಲಿ ದೈವ, ದೇವರ ಆಚಾರ ವಿಚಾರದಲ್ಲಿ ಪ್ರಾಚೀನ ಸಂಪ್ರದಾಯಗಳು ಇವೆ, ಇದರಲ್ಲಿ ಕೋಳಿ ಅಂಕವೂ ಪ್ರಾಚೀನ ಸಂಪ್ರದಾಯವಾಗಿದೆ. ಇದನ್ನು ಉಳಿಸಿ ಬೆಳೆಸುವಲ್ಲಿ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಹುಟ್ಟಿಕೊಂಡಿದೆ.ಕೋಳಿ ಅಂಕವನ್ನ ಮತ್ತೆ ಕರಾವಳಿಯಲ್ಲಿ ಮುಂದುವರಿಸುವಂತೆ ಹೋರಾಟ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ಸರ್ಕಾರಕ್ಕೆ ಕೋಳಿ ಅಂಕದ ಬಗ್ಗೆ ಸರಿಯಾದ ಮಾಹಿತಿ ನೀಡಲು ಹಾಗೂ ಜಾತ್ರೆ, ನೇಮೋತ್ಸವದ ಬಳಿಕ ನಡೆಯುವ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಇರುವ ಇತಿಹಾಸವನ್ನು ಸರಕಾರ ತಿಳಿಸಬೇಕು ಎನ್ನುವ ನಿಟ್ಟಿನಲ್ಲಿ ಸಭೆಯನ್ನು ಕರೆಯಲಾಗಿದೆ.

A man suffering from stomach pain in Sullia committed suicide by hanging himself!- ತುಳುಟೈಮ್ಸ್

ಇದನ್ನೂ ಓದಿ: ಆರ್ಥಿಕ ಸಮೀಕ್ಷೆ 2025–26: ಅಲ್ಟ್ರಾ–ಪ್ರೊಸೆಸ್ಡ್ ಆಹಾರ ಸೇವನೆ ಭಾರೀ ಏರಿಕೆ

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page