ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಪ್ಯಾಲೆಸ್ಟೈನ್ ಸಿನಿಮಾಗಳಿಗೆ ರಾಜ್ಯದಲ್ಲಿ ಅವಕಾಶ ಕೊಡಬಾರದು: ಡಾ. ಭರತ್‌ ಶೆಟ್ಟಿ ಒತ್ತಾಯ!

ಮಂಗಳೂರು: Tulu Times | ಪ್ಯಾಲೆಸ್ಟೈನ್ ಸಿನಿಮಾಗಳಿಗೆ ರಾಜ್ಯದಲ್ಲಿ ಅವಕಾಶ ಕೊಡಬಾರದು ಎಂದು ಶಾಸಕ ಡಾ. ಭರತ್‌ ಶೆಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ನಟ ಪ್ರಕಾಶ್ ರಾಜ್ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಭರತ್ ಶೆಟ್ಟಿ, ಪ್ಯಾಲೆಸ್ಟೈನ್ ಸಿನಿಮಾಗಳ ಹಿಂದೆ ಒಂದು ಹಿಡನ್ ಅಜೆಂಡಾ ಇರುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅಜೆಂಡಾ ಸಿನಿಮಾಗಳಲ್ಲಿ ಇರುವುದನ್ನು ನಾವು ನೋಡಿದ್ದೇವೆ, ಹಾಗಾಗಿ ಕರ್ನಾಟಕದಲ್ಲಿ ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದರು. ಹಿಂದೂ ವಿರೋಧಿ, ದೇಶದ ಪರಿಕಲ್ಪನೆಗೆ ವಿರುದ್ಧವಾದ ಮನಸ್ಥಿತಿ ಇರುವಂತಹ ವ್ಯಕ್ತಿ ಪ್ರಕಾಶ್ ರಾಜ್ ಅವರ ಮನಸ್ಥಿತಿ ನಮಗೆಲ್ಲರಿಗೂ ಗೊತ್ತಿರುವಂತಹದ್ದು ಎಂದರು.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದ ಪ್ರಕಾಶ್ ರಾಜ್ ಪ್ಯಾಲೆಸ್ಟೈನ್ ಸಿನಿಮಾಗಳಿಗೆ ಕೇಂದ್ರ ಸರ್ಕಾರ ತಡೆ ಹಾಕಿರುವುದರ ವಿರುದ್ಧ ರಾಜ್ಯ ಸರ್ಕಾರ ಧ್ವನಿ ಎತ್ತಬೇಕು ಎಂದಿದ್ದರು. ಕರ್ನಾಟಕದಲ್ಲಿ ಈ ರೀತಿಯ ಸಿನಿಮಾಗಳಿಗೆ ನಾವು ಖಂಡಿತ ಅವಕಾಶ ಮಾಡಿಕೊಡಬಾರದು. ಪ್ರಕಾಶ್ ರಾಜ್ ಅವರದ್ದೇ ಒಂದು ಹಿಡನ್ ಅಜೆಂಡಾ ಇರುತ್ತದೆ ಎಂದು ಭರತ್ ಶೆಟ್ಟಿ ಟೀಕಿಸಿದ್ದಾರೆ.

ಕೆಎಸ್‌ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ಬ್ರೇಕ್

ಕೆಎಸ್‌ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ಬ್ರೇಕ್ ಹಾಕಲಾಗಿದ್ದು, ಸಾರಿಗೆ ಸಚಿವರಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಪ್ರತಿಯೊಂದು ಸರ್ಕಾರಿ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಹೀಗಾಗಿ ಜಾಹೀರಾತು ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕೆಲವು ಬಸ್‌ಗಳ ಮೇಲಿದ್ದ ಜಾಹೀರಾತುಗಳನ್ನು ಜನರು ಕಿತ್ತು ಹಾಕಿದ್ದ ಘಟನೆಗಳು ನಡೆದಿದ್ದವು.

ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್‌ಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಲಾಗಿದೆ.

ಇನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸೂಚಿಸಿದ್ದಾರೆ.

Palestinian films should not be allowed in the state: Dr. Bharat Shetty insists!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page