ಬೆಳ್ತಂಗಡಿ: Tulu Times | ಬೆಳ್ತಂಗಡಿ ತಾಲೂಕಿನಲ್ಲಿ ಏಕಾಏಕಿಯಾಗಿ ತಡೆಗೋಡೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಉಜಿರೆಯಿಂದ ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಜ.31 ರಂದು ಬೆಳಗ್ಗೆ ತಾಲೂಕಿನ ಉಜಿರೆ – ಸುರ್ಯ ರಸ್ತೆಯಲ್ಲಿ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾನೆ. ತಕ್ಷಣವೇ ಆತನನ್ನು ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ತಡೆಗೋಡೆ ಕುಸಿದ ವೇಳೆ ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಆಘಾತಕಾರಿ ಘಟನೆ: ಸರ್ಕಾರಿ ಶಾಲೆಯಲ್ಲಿ ತೆರೆದ ಚರಂಡಿ ಬಳಿ ಮಕ್ಕಳು
ಸುಳ್ಯದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಸುಳ್ಯ: ಪ್ರತ್ಯೇಕ ಪ್ರಕರಣದಲ್ಲಿ, ಕಡಬ ತಾಲೂಕಿನ ಹೂರು ಎಂಬಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕುದ್ಮಾರು ಗ್ರಾಮದ ನಿವಾಸಿ ಬಾಬು ಗೌಡ (46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇದರ ಜೊತೆಗೆ ಗ್ಯಾಸ್ಟಿಕ್ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ಇದಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೇ ಇದ್ದದ್ದರಿಂದ ಮಾನಸಿಕವಾಗಿ ನೊಂದಿದ್ದರು. ಹೀಗಾಗಿ ವಿಪರೀತ ನೋವಿನಲ್ಲಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ, ಸ್ನಾನದ ಕೋಣೆಯ ಮಾಡಿನ ಕಬ್ಬಿಣದ ರಾಣಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ಸುನಂದಾ (42) ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪುತ್ತೂರು: ಕೋಳಿ ಅಂಕಕ್ಕಾಗಿ ಬೃಹತ್ ಹೋರಾಟ !
ಪುತ್ತೂರು: ಪ್ರತ್ಯೇಕ ಪ್ರಕರಣದಲ್ಲಿ, ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಬೃಹತ್ ಹೋರಾಟ ನಡೆಯಲಿದ್ದು ಫೆ.1ರಂದು ಸಮಾಲೋಚನಾ ಸಭೆ ನಡೆಯಲಿದೆ.
ಸಾಂಪ್ರದಾಯಿಕ ಕೋಳಿ ಅಂಕ ಉಳಿಸುವ ನಿಟ್ಟಿನಲ್ಲಿ ಹೋರಾಟಗಾರರು ಮುಂದಾಗಿದ್ದು, ಫೆಬ್ರವರಿ 1 ರಂದು ಪುತ್ತೂರಿನಲ್ಲಿ ಬೃಹತ್ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಈ ಬಾರಿ ಸಾಂಪ್ರದಾಯಿಕ ಕೋಳಿ ಅಂಕಗಳನ್ನು ನಡೆಸದಂತೆ ತಡೆದಿದ್ದಾರೆ. ಹಾಗಾಗಿ ಬೃಹತ್ ಹೋರಾಟ ನಡೆಸಲು ಯೋಚಿಸಲಾಗಿದೆ.
Belthangady: One dead after barrier collapses- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











