ಬ್ರೇಕಿಂಗ್ ನ್ಯೂಸ್
ಕರಾವಳಿ

ಮಂಗಳೂರು: ಕದ್ರಿ ಪಾರ್ಕ್ ರಸ್ತೆಯಲ್ಲಿ ಮೂರು ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್‌ಗೆ ಚಾಲನೆ

ಮಂಗಳೂರು : Tulu Times | ಕರಾವಳಿ ಉತ್ಸವದ ಅಂಗವಾಗಿ ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ಮೂರು ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್‌ಗೆ ಶುಕ್ರವಾರ (ಜನವರಿ 30) ಚಾಲನೆ ನೀಡಲಾಯಿತು. ಖ್ಯಾತ ಶೆಫ್ ಶ್ರಿಯಾ ಶೆಟ್ಟಿ ಅವರು ಉತ್ಸವವನ್ನು ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶ್ರಿಯಾ ಶೆಟ್ಟಿ, ಕರಾವಳಿ ಕರ್ನಾಟಕದ ಜನರ ಆಹಾರ ಅಭಿರುಚಿ ಅತ್ಯಂತ ವಿಶಿಷ್ಟವಾಗಿದೆ ಎಂದು ಹೇಳಿದರು. ಇಲ್ಲಿನ ಜನರಿಗೆ ತಿಂಡಿ–ತಿನಿಸುಗಳು ಮತ್ತು ಸ್ಟ್ರೀಟ್ ಫುಡ್‌ಗಳ ಮೇಲಿರುವ ಪ್ರೀತಿ ಕರಾವಳಿ ಪ್ರದೇಶದ ಆಹಾರ ಸಂಸ್ಕೃತಿಯನ್ನು ಇನ್ನಷ್ಟು ಶ್ರೀಮಂತಗೊಳಿಸಿದೆ. ವೈವಿಧ್ಯಮಯ ಸವಿರುಚಿಗಳಿಗಾಗಿ ಕರಾವಳಿ ಪ್ರದೇಶ ದೇಶಾದ್ಯಂತ ಪ್ರಸಿದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮಾತನಾಡಿ, ಈ ವರ್ಷದ ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾದ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ಲಭಿಸಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ಶುಕ್ರವಾರದಿಂದ ಭಾನುವಾರವರೆಗೆ ನಡೆಯಲಿರುವ ಈ ಸ್ಟ್ರೀಟ್ ಫುಡ್ ಫೆಸ್ಟ್‌ನಲ್ಲಿ ಆಕರ್ಷಕವಾದ ವಿವಿಧ ರೀತಿಯ ತಿಂಡಿ–ತಿನಿಸುಗಳು, ಚಾಟ್‌ಗಳು, ಪಾನೀಯಗಳು, ಸಸ್ಯಾಹಾರಿ ಹಾಗೂ ಮಾಂಸಾಹಾರಿ ಆಹಾರ ಮಳಿಗೆಗಳು ಜನರ ಗಮನ ಸೆಳೆಯುತ್ತಿವೆ. ಉತ್ಸವದ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಕಾರ್ಯಕ್ರಮದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಕುಮಾರ್, ಉಪ ಪ್ರಧಾನ ವ್ಯವಸ್ಥಾಪಕಿ ತೇಜಸ್ವಿನಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಯತೀಶ್ ಬೈಕಂಪಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Mangalore: Three-day street food fest kicks off on Kadri Park Road – ತುಳು ಟೈಮ್ಸ್

ಇದನ್ನೂ ಓದಿ : ಹಾಸನದಲ್ಲಿ ಜಾಗ ಗಲಾಟೆ ತಾವೇ ನಿಂತು ಕಂಪೌಂಡ್ ಹಾಕಿಸ್ತಿರುವ ಯಶ್ ತಾಯಿ.

======

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/yyHI_WJ6OnU?si=T3BoWndcrzE4KYJW

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 30

You cannot copy content of this page