ಬೆಳ್ತಂಗಡಿ: Tulu Times | ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ಜ.31 ರಂದು ತಡೆ ನೀಡಿದೆ. ಡಿ.17 ರಂದು 10 ತಿಂಗಳ ಕಾಲ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನಿ, ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಆದೇಶ ನೀಡಿದ್ದರು.
ಇದನ್ನೂ ಓದಿ: ಈ ವರ್ಷದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ !
ಈ ಕುರಿತು ಪ್ರಶ್ನಿಸಿದ ಮಹೇಶ್ ಶೆಟ್ಟಿ ತಿಮರೋಡಿ ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶ ಪ್ರಶ್ನಿಸಿ, ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ, 21 ದಿನದೊಳಗೆ ಪ್ರಕರಣದ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಇದನ್ನೂ ಓದಿ: ಕಾನ್ಫಿಡೆಂಟ್ ಸಂಸ್ಥಾಪಕ ಸಿ.ಜೆ. ರಾಯ್ ಮರಣ ಪ್ರಕರಣಕ್ಕೆ ಕೇಂದ್ರಬಿಂದುವಾದ 5 ಪ್ರಮುಖ ಅಂಶಗಳು
ಬೆಳ್ತಂಗಡಿಯಲ್ಲಿ ತಡೆಗೋಡೆ ಕುಸಿದು ಬಿದ್ದು ಓರ್ವ ಸಾವು
ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಏಕಾಏಕಿಯಾಗಿ ತಡೆಗೋಡೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಉಜಿರೆಯಿಂದ ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಜ.31 ರಂದು ಬೆಳಗ್ಗೆ ತಾಲೂಕಿನ ಉಜಿರೆ – ಸುರ್ಯ ರಸ್ತೆಯಲ್ಲಿ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾನೆ. ತಕ್ಷಣವೇ ಆತನನ್ನು ಸ್ಥಳೀಯರು ರಕ್ಷಣೆಗೆ ಧಾವಿಸಿ ತುತುಣಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ತಡೆಗೋಡೆ ಕುಸಿದ ವೇಳೆ ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Belthangady: High Court stays Mahesh Shetty’s deportation order!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











