Puttur: ಅ. 20ರಂದು ನಡೆದ ಅಶೋಕ ಜನಮನ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚು ಜನರು ಆಗಮಿಸಿದ್ದು, ಈ ವೇಳೆ ಉಂಟಾದ ನೂಕುನುಗ್ಗಲಿನಿಂದ ಉಸಿರುಗಟ್ಟಿ 13 ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ.
ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಜಾಸ್ತಿಯಾಗಿ ಸಾರ್ವಜನಿಕರು ಸೇರಿದ ಕಾರಣ ಮತ್ತು ಮಧ್ಯಾಹ್ನದ ನಂತರದಲ್ಲಿ ಗಾಳಿ ಮಳೆ ಬಂದ ಕಾರಣ ಜನರ ನಡುವೆ ಸಿಲುಕಿ ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ.
ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದರೂ ಜನಸಂದಣಿ ಹೆಚ್ಚಾದ ಕಾರಣ ಸ್ವಲ್ಪ ವ್ಯತ್ಯಾಸ ಉಂಟಾಗಿದೆ. ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ, ಬೇಸರವಾಗಿದೆ ಇದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.
ಕಾರ್ಯಕ್ರಮಕ್ಕೆ ಬಂದವರಲ್ಲಿ ಯಾರ ಮನಸ್ಸಿಗೂ ನೋವಾಗಿದ್ದಲ್ಲಿ ಕ್ಷಮೆ ಕೇಳುತ್ತೇನೆ. ಸಂಜೆ ಬಳಿಕ ರಾತ್ರಿ 9.30 ರವರೆಗೂ ಉಡುಗೊರೆ ವಿತರಣೆ ನಡೆದಿದೆ. ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ವಿಕ್ರಮ್ ಪಾಕಿಗಳ ನಿದ್ರೆಗೆಡಿಸಿತ್ತು: ಆಪರೇಷನ್ ಸಿಂಧೂರ ಕುರಿತು ಪ್ರಧಾನಿ ಮೋದಿ ಶ್ಲಾಘನೆ
=======================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess











