ಪುತ್ತೂರು:Tulu Times |ತಲೆಪ್ಪಾಡಿ ಬೆಟ್ಟಂಪಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೊಹಮ್ಮದ್ ಸುಹ್ಮಬ್ (19) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಕೆಲವು ದಿನಗಳ ಹಿಂದೆ ಬೆಳಿಗ್ಗೆ ಮೊಹಮ್ಮದ್ ಸುಹ್ಮಬ್ ಯಾವುದೋ ಕಾರಣದಿಂದಾಗಿ ಮನನೊಂದು ಇಲಿ ಪಾಷಣ ಸೇವಿಸಿದ್ದಾನೆ. ವಿಷಯ ತಿಳಿದು ಮನೆಯವರು ಚಿಕಿತ್ಸೆ ಬಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸುಹ್ಮಬ್ ಯುವಕ ಪಿಯುಸಿವರೆಗೆ ಓದಿದ್ದು, ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೊಹಮ್ಮದ್ ಸುಹ್ಮಬ್ ಚಿಕಿತ್ಸೆಗೆ ಫಲಿಸದೇ ಬೆಳಿಗ್ಗೆ 05.15 ಗಂಟೆಗೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣಾ UDR ನಂ 06/2026 ಕಲಂ 194 ಬಿಎನ್ ಎಸ್ ಎಸ್ 2023ಯಂತೆ ಪ್ರಕರಣ ದಾಖಲಾಗಿದೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್ ಮುಲ್ಲಾರ್ ಆಸ್ಪತ್ರೆಗೆ ಕಳುಹಿಸಲಾಗಿತ್ತು.
ಇದನ್ನೂ ಓದಿ: ಬಿಜೆಪಿ- ಜೆಡಿಎಸ್ ಅಹೋರಾತ್ರಿ ಧರಣಿ..ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯ!
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಹೆಡ್ ಕಾನ್ಸ್ ಟೇಬಲ್ ಸಾವು
ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ, ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಹಾವೇರಿ ಮೂಲದ ಮಾರುವ ಲಮಾಣಿ(36) ನಿಧನರಾಗಿದ್ದಾರೆ. ಮಂಗಳೂರು ನಗರ ಸಶಸ್ತ್ರದಳದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಇವರು ಹೈವೇ ಪೆಟ್ರೋಲಿಂಗ್ ಹುಡು ಕಾರಿನಲ್ಲಿ ಡ್ರೈವರ್ ಆಗಿ ಕರ್ತವ್ಯದಲ್ಲಿದ್ದರು.
ಇದನ್ನೂ ಓದಿ: ಟ್ಯಾಕ್ಸ್ ಕಟ್ಟದ ವಿದೇಶಿ ಕಂಪನಿ-ಗ್ರಾ.ಪಂ ನಿಂದ ಹೋರಾಟಕ್ಕೆ ಗಡುವು!
ಮಾರುತಿ ಸಿಎಆರ್ ಯುನಿಟ್ ನಲ್ಲಿ 9 ವರ್ಷಗಳಿಂದ ಕೆಲಸ ಮಾಡುತ್ತಿದ್ದು ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದಿದ್ದರು. ಮೃತ ಮಾರುತಿ, ಭಾನುವಾರ ಬೆಳಗ್ಗೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು. ಇವರ ಪತ್ನಿಯೂ ಕದ್ರಿ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡುತ್ತಿದ್ದಾರೆ. ಮಾರುತಿ ಲಮಾಣಿ ಮನೆಗೆ ಬಂದು ಮಲಗಿದ್ದರು ಈ ಸಂದರ್ಭದಲ್ಲಿ ಮಾರುತಿ ಅಸ್ವಸ್ಥರಾಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಾರುತಿ ಲಮಾಣಿ ಸಾವನಪ್ಪಿದ್ದಾರೆ ಎನ್ನಲಾಗಿದೆ.
Puttur: A young man who attempted suicide by consuming poison dies.- ತುಳುಟೈಮ್ಸ್
ಇದನ್ನೂ ಓದಿ: ಬೆಳ್ತಂಗಡಿ: ಮಹೇಶ್ ಶೆಟ್ಟಿ ಗಡಿಪಾರು ಆದೇಶಕ್ಕೆ ಹೈ ಕೋರ್ಟ್ ತಡೆಯಾಜ್ಞೆ!
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











