ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಪೆದ್ದಿ ಬಿಡುಗಡೆ ದಿನಾಂಕ ಪೋಸ್ಟ್ ಪೋನ್..ಯಾವಾಗ ರಿಲೀಸ್ ರಾಮ್ ಚರಣ್ ಸಿನಿಮಾ?

ಕರ್ನಾಟಕ: Tulu Times | ಗ್ಲೋಬಲ್ ಸ್ಟಾರ್ ರಾಮ್‌ ಚರಣ್ ತೇಜಾ ನಟಿಸುತ್ತಿರುವ ‘ಪೆದ್ದಿ’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಬುಚ್ಚಿ ಬಾಬು ಸನಾ ಆಕ್ಷನ್ ಕಟ್ ಹೇಳಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್ 27ರಂದು ರಿಲೀಸ್ ಆಗಬೇಕಿದ್ದ ಪೆದ್ದಿ ಸಿನಿಮಾ ಏಪ್ರಿಲ್ 30ಕ್ಕೆ ವಿಶ್ವಾದ್ಯಂತ ಥಿಯೇಟರ್ ಗೆ ಲಗ್ಗೆ ಇಡಲಿದೆ.

ರಾಮ್ ಚರಣ್ ನಟಿಸುತ್ತಿರುವ ‘ಪೆದ್ದಿ’ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದೆ. ನಾಯಕಿಯಾಗಿ ಜಾಹ್ನವಿ ಕಪೂರ್ ಅಭಿನಯಿಸಿದ್ದಾರೆ.‌ಈ ಸಿನಿಮಾದಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ಪಾತ್ರ ಅಂದರೆ, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ ಒಂದು ಖಡಕ್ ರೋಲ್ ಕಾಣಿಸಿಕೊಳ್ಳುತ್ತಿದ್ದಾರೆ.‌ ಇವರೆಲ್ಲರ ಹೊರತಾಗಿ ಜಗಪತಿ ಬಾಬು, ದಿವೇಂದು ಶರ್ಮಾ ಇವರಿಬ್ಬರೂ ಸೇರಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಹೆಡ್ ಕಾನ್ಸ್ ಟೇಬಲ್ ಸಾವು
ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಆಗಿದೆ. ಈ ಸಿನಿಮಾ ಎಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು,‌ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ.

ವಿಂಟೇಜ್ ಲುಕ್‌ನಲ್ಲಿ ಕಯಾದು ಲೋಹರ್…’ಪಳ್ಳಚಟ್ಟಂಬಿ’ಯಲ್ಲಿ ಟೋವಿನ್ ಥಾಮನ್ ಗೆ ನಾಯಕಿ

ಮಲಯಾಳಂ‌ ನಟ ಟೋವಿನೋ ಥಾಮಸ್ ನಟಿಸುತ್ತಿರುವ ಬಹು ನಿರೀಕ್ಷಿತ ಪಳ್ಳಿಚಟ್ಟಂಬಿ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ನಾಯಕಿ ಕಯಾದು ಲೋಹರ್ ಫಸ್ಟ್ ಲುಕ್ ಅನಾವರಣ ಮಾಡಲಾಗಿದ್ದು, ವಿಂಟೇಜ್ ಲುಕ್ ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಡಿಜೋ ಜೋಸ್ ಆಂಟೋನಿ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ವಿಜಯರಾಘವನ್, ಸುಧೀರ್ ಕರಮನ, ಬಾಬುರಾಜ್, ವಿನೋದ್ ಕೆದಮಂಗಲಂ, ಪ್ರಶಾಂತ್ ಅಲೆಕ್ಸಾಂಡರ್ ತಾರಾಗಣದಲ್ಲಿದ್ದಾರೆ. 1950-60ರ ದಶಕದ ಸುತ್ತ ಕಥೆಯನ್ನು ಎಣೆಯಲಾಗಿದೆ.

ಚಿತ್ರದ ಛಾಯಾಗ್ರಹಣವನ್ನು ಟಿಜೊ ಟಾಮಿ ನಿರ್ವಹಿಸಿದರೆ, ಜೇಕ್ಸ್ ಬಿಜಾಯ್ ಸಂಗೀತ ಸಂಯೋಜಿಸಿದ್ದಾರೆ. ಸಂಕಲನವನ್ನು ಶ್ರೀಜಿತ್ ಸಾರಂಗ್ ಮತ್ತು ನಿರ್ಮಾಣ ವಿನ್ಯಾಸವನ್ನು ದಿಲೀಪ್ ನಾಥ್ ನಿರ್ವಹಿಸಿದ್ದಾರೆ. ಚಿತ್ರಕಥೆಯನ್ನು ಎಸ್ ಸುರೇಶ್ ಬಾಬು ಬರೆದಿದ್ದಾರೆ.

ಪಳ್ಳಚಟ್ಟಂಬಿ ಸಿನಿಮಾ ವರ್ಲ್ಡ್ ವೈಡ್ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ನೌಫಲ್ ಮತ್ತು ಬ್ರಿಜೀಶ್ ನಿರ್ಮಿಸಿದ್ದಾರೆ, ಜೊತೆಗೆ ಸಿ ಕ್ಯೂಬ್ ಬ್ರದರ್ಸ್ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್‌ನಡಿಯಲ್ಲಿ ಚಾಣುಕ್ಯ ಚೈತನ್ಯ ಚರಣ್ ನಿರ್ಮಿಸಿದ್ದಾರೆ. ಪಳ್ಳಚಟ್ಟಂಬಿ ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಏಪ್ರಿಲ್ 9 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Peddi release date postponed..when will Ram Charan’s movie release?- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page