Puttur: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋಮುಗಲಭೆ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಯತ್ನ ಆಗುತ್ತಿದೆ. ರಾಜ್ಯದಲ್ಲಿ RSS ಚಟುವಟಿಕೆ ಬ್ಯಾನ್ ಕುರಿತಂತೆ ಈಗಾಗ್ಲೇ ಆದೇಶ ಹೊರಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ತೂರಿನಲ್ಲಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.
ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವವರು, ಅಪಪ್ರಚಾರ ಮಾಡುವವರು, ಸುಳ್ಳು ಹೇಳುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಅಶೋಕ ಜನಮನ’ ದೀಪಾವಳಿ ಉಡುಗೊರೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ-ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸುವುದರಲ್ಲಿ ದ.ಕ. ಜಿಲ್ಲೆ ನಂಬರ್ ವನ್ ಆಗಿತ್ತು. ಇದನ್ನು ಸರಿಪಡಿಸುವ ಉದ್ದೇಶದಿಂದ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ಕಡಿವಾಣ ಹಾಕಲು ಜಿಲ್ಲೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಿದ್ದು, ಕೋಮು ಸೌಹಾರ್ದತೆಗೆ ಧಕ್ಕೆ, ಅಪಪ್ರಚಾರ, ಸುಳ್ಳು ಹೇಳುವವರ ವಿರುದ್ಧ ಕಾನೂನು ಕ್ರಮಕ್ಕಾಗಿ ಮಸೂದೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ರು.
ಇದನ್ನೂ ಓದಿ: Hasanamba Temple: 2 ದಿನದಲ್ಲಿ 23 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess











