ಮಂಗಳೂರು: Tulu Times | ಭಾರತೀಯರನ್ನು ಗುರಿಯಾಗಿಸಿ ವಂಚನೆ ನಡೆಸಿ, ನೇಪಾಳದಲ್ಲಿದ್ದುಕೊಂಡು ಆನ್‌ಲೈನ್ ಹೂಡಿಕೆ ನೆಪದಲ್ಲಿ ಜನರನ್ನು ವಂಚಿಸಿರುವ ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ ಗೆದ್ದ ಉಡುಪಿಯ ಹುಡುಗ..!
11 ಆರೋಪಿಗಳು ಅರೆಸ್ಟ್ !
ವಂಚನೆ ನಡೆಸಿರುವ ತಂಡವನ್ನು ಭೇದಿಸಿರುವ ಇಲ್ಲಿನ ಸೆನ್ ಕ್ರೈಂ ಠಾಣೆಯ ಪೊಲೀಸರು ಈ ಸಂಬಂಧ 11 ಆರೋಪಿಗಳನ್ನು ಬಂಧಿಸಿದ್ದು, ಇವರಿಂದ ಒಂದು ಲ್ಯಾಪ್ ಟಾಪ್, ವಿವಿಧ ಕಂಪನಿಗಳ 21 ಮೊಬೈಲ್ ಪೋನ್‌ಗಳು, ವಿವಿಧ ಕಂಪನಿಗಳ 20 ಸಿಮ್ ಕಾರ್ಡ್‌ಗಳು, ಬೇರೆ ಬೇರೆ ಬ್ಯಾಂಕ್‌ಗಳ 20 ಡೆಬಿಟ್ ಕ್ರೆಡಿಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 16 ಭಾರತೀಯರು ಹಾಗೂ ಒಬ್ಬ ಚೀನಾ ಪ್ರಜೆ ಸೇರಿ 17 ಮಂದಿ ಸೇರಿಕೊಂಡು ಆನ್‌ಲೈನ್ ಹೂಡಿಕೆ ನೆಪದಲ್ಲಿ ಜನರನ್ನು ವಂಚಿಸುತ್ತಿದ್ದರು. 11 ಆರೋಪಿಗಳನ್ನು ಸೆನ್ ಕ್ರೈ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಚೀನಾದ ಆರೋಪಿಯನ್ನು ನೇಪಾಳದ ಪೊಲೀಸರು ಬಂಧಿಸಿದ್ದಾರೆ. ಗುರುವಾರ ಈ ಕುರಿತು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿಯಲ್ಲಿ ಚಿರತೆ ಭಯ.ಸೋಶಿಯಲ್ ಮೀಡಿಯಾದಲ್ಲಿ ಚಿರತೆ ಬಂತು ಚಿರತೆ !
ಬಂಧಿತ ಆರೋಪಿಗಳು ಯಾರು..?
ಗುಜರಾತಿನ ಭಾವನಗರ ಜಿಲ್ಲೆಯ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಕೋಲ್ಕತ್ತದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಾಂಡ್‌ನ ಸಿಂಗಬುಮ್ ಜಿಲ್ಲೆ ಪುಪ್ಲ ಶಿವ ಕುಮಾರ್ ರಾವ್ (32), ಮಿಥುನ್ ಕುಮಾರ್ ಮಂಗರಾಜ್ (38), ಡಿಯೋಗರ್ ಜಿಲ್ಲೆಯ ರಾಜೇಶ್ ಮಂಡನ್ (30), ಉತ್ತರ ಪ್ರದೇಶದ ಮಾವೋ ಜಿಲ್ಲೆಯ ಗೌರವ್ ಪಾಂಡೆ (24), ಸುಲ್ತಾನ್ ಪುರ್ ಜಿಲ್ಲೆಯ ಹರ್ಷ್ ಮಿಸ್ರಾ (22), ಲಖನೌ ಜಿಲ್ಲೆಯ ಮೊಹಮ್ಮದ್ ಆಕೀಬ್ ಅಲಿ (27) , ಝಾನ್ಸಿ ಜಿಲ್ಲೆಯ ನೌಶಾದ್ ಅಲಿ (34), ಬಿಹಾರದ ನಳಂದ ಜಿಲ್ಲೆಯ ರಾಜೀವ್ ರಂಜನ್ ಕುಮಾರ್ (30), ರಾಜಾಸ್ಥಾನದ ಜೈಪುರದ ಓಂ ಪ್ರಕಾಶ್ ಯಾದವ್ (37) ಬಂಧಿತರಾಗಿದ್ದಾರೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಪ್ರವಾಸಿ ಬಸ್ ಆರಂಭಕ್ಕೆ ಜನರ ಆಗ್ರಹ
Mangaluru: Nepali cybercrime gang arrested- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess
ಮಂಗಳೂರು: ನೇಪಾಳಿ ಸೈಬರ್ ಕ್ರೈಂ ಗ್ಯಾಂಗ್ ಬಂಧನ ಹೆಜಮಾಡಿ ಟೋಲ್ ಬಳಿ ಕೇರಳ ವಿದ್ಯಾರ್ಥಿಗಳ ರಂಪಾಟ











