ಪುತ್ತೂರು: Tulu Times | ಪುತ್ತೂರಿನ ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ.
ಇದನ್ನೂ ಓದಿ: ಉಡುಪಿ ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ತಮಿಳುನಾಡು ನೋಂದಣಿಯ ಸರಕು ಹೊತ್ತ ಲಾರಿ ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಪಕ್ಕದ ವಿದ್ಯುತ್ ಕಂಬದ ಮೇಲೆ ಬಿದ್ದಿದ್ದು ಯಾರಿಗೂ ಏನೂ ಪ್ರಾಣಾಪಾಯವಾಗಿಲ್ಲ. ರಾತ್ರಿ ಲಾರಿಯನ್ನು ರಸ್ತೆಯಿಂದ ತೆರವು ಮಾಡಿ ವಾಹನ ಸಂಚಾರಕ್ಕೆ ಸುಗಮ ಮಾಡಲಾಗಿದ್ದು, ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿವೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಸ್ಕೂಟರ್ ಹಿಂಬದಿ ಸವಾರೆಯ ಸಾವಿನ ನ್ಯಾಯಕ್ಕಾಗಿ ಜನ ಆಕ್ರೋಶ !
ಮಣಿಪಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
ಮಣಿಪಾಲ: ಪ್ರತ್ಯೇಕ ಪ್ರಕರಣದಲ್ಲಿ, ಮಣಿಪಾಲದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದಲ್ಲಿ ಕಳ್ಳತನ ನಡೆದಿದೆ.
ಇದನ್ನೂ ಓದಿ: ಜಾತಕ ಹೇಳ್ತೀನಿ ಅಂತ ಹೇಳಿ ಯುವತಿಯ ಮೇಲೆ ಅರ್ಚಕ ಅತ್ಯಾಚಾರ..!
ಮನೆಯ ಬಾಗಿಲು ಹಾಗೂ ಹೊರಗಿನ ಗೇಟಿಗೆ ಬೀಗ ಹಾಕಿ ಶಿವಳ್ಳಿ ಗ್ರಾಮದ ಅಮಿತಾ ಡ್ಯಾನಿಯಲ್ ಕರ್ಕಡ ಇವರು ಫೆ. 3 ರಂದು ಮಧ್ಯಾಹ್ನ 01.45 ಗಂಟೆಗೆ ತಾಯಿ ಮನೆಗೆ ತೆರಳಿದ್ದರು. ಫೆ. 02ರಂದು ಮಧ್ಯಾಹ್ನ 01.30 ಗಂಟೆಗೆ ಮನೆಯ ಬಾಗಿಲು ತೆರೆದಿರುವುದಾಗಿ ಪಕ್ಕದ ಮನೆಯವರು ಮಾಹಿತಿ ನೀಡಿದ ಹಿನ್ನೆಲೆ ವಿಚಾರ ಗೊತ್ತಾಗಿದೆ. ನಂತರ ಪೊಲೀಸರು ಅಲ್ಲಿಗೆ ಬಂದು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಧ್ಯಾಹ್ನ 02.00 ಗಂಟೆಯ ನಡುವಿನ ಅವಧಿಯಲ್ಲಿ ಅಜ್ಞಾತ ಕಳ್ಳರು ಮನೆಯೊಳಗೆ ಪ್ರವೇಶಿಸಿ ಸುಮಾರು 75 ಗ್ರಾಂ ತೂಕದ, ಅಂದಾಜು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಗೊತ್ತಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದಾಳಿ ಮಾಡಲು ಸಂಚು!
Lorry overturns after losing control in Puttur- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











