Kasaragod: ಮನೆಯ ಅಂಗಳದಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಅ. 20ರ ಸೋಮವಾರ ರಾತ್ರಿ ಈ ಅವಘಡ ಸಂಭವಿಸಿದೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ.
ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ ಅಂಗಳದಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದೆ. ಕುಟುಂಬ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ.
ರಾಜೇಶ್ ವೃತ್ತಿಯಲ್ಲಿ ಬಡಗಿಯಾಗಿ ಕೆಲಸ ಮಾಡುತ್ತಿದ್ದರು. ಹಬ್ಬದ ಸಮಯದಲ್ಲಿಯೇ ಯುವಕ ದುರಂತ ಸಾವನ್ನಪ್ಪಿದ್ದು ಕುಟುಂಬವನ್ನು ಕಣ್ಣೀರ ಕೋಡಿಯಲ್ಲಿ ಮುಳುಗಿಸಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Puttur: ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
==================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess











