ಕಾರ್ಕಳ: Tulu Times | ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಅತ್ತೂರು ಚರ್ಚ್ ಬಳಿ ಈ ಘಟನೆ ನಡೆದಿದ್ದು, ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ.
ಸಮೀಪದ ದೂಪದಕಟ್ಟೆಯಿಂದ ಕಾರ್ಕಳ ಬರುತ್ತಿದ್ದ ಕಾರಿಗೆ ಕಾರ್ಕಳದಿಂದ ದೂಪದಕಟ್ಟೆಯತ್ತ ಸಾಗುತ್ತಿದ್ದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬೈಕ್ ರಸ್ತೆ ದಾಟಿ ಪೊದೆಗೆ ಉರುಳಿದೆ. ರುದ್ರೇಶ್ ಹಾಗೂ ಹರೀಶ್ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ಸವಾರರನ್ನು ಕಾರ್ಕಳದ ಆಸ್ಪತ್ರೆಯೊಂದರಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾನಹಾನಿಕರ ಹೇಳಿಕೆ ನೀಡಿರುವ ಆರೋಪದಡಿ ಪ್ರತಿಭಾ ಕುಳಾಯಿಗೆ ಪೊಲೀಸರು ನೋಟೀಸ್
ಪುತ್ತೂರು: ಪ್ರತ್ಯೇಕ ಪ್ರಕರಣದಲ್ಲಿ, ಮಾನಹಾನಿಕರ ಹೇಳಿಕೆ ನೀಡಿರುವ ಆರೋಪದಡಿ ಪ್ರತಿಭಾ ಕುಳಾಯಿಗೆ ಪುತ್ತೂರು ಪೊಲೀಸರಿಂದ ನೋಟೀಸ್ ನೀಡಲಾಗಿದೆ. ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ದ ಪುತ್ತೂರು ನಗರ ಠಾಣೆ ಪೊಲೀಸರು ನೋಟೀಸ್ ನೀಡಿದ್ದಾರೆ. ತನ್ನ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ದ ಪುತ್ತೂರು ನಗರ ಠಾಣೆ ಪೊಲೀಸರು ನೋಟೀಸ್ ನೀಡಿದ್ದಾರೆ. ತನ್ನ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪಿ.ಜಿ.ಜಗನ್ನಿವಾಸ್ ರಾವ್ ಅವರು, ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣದಲ್ಲಿ ನಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಮತ್ತು ಸಂದರ್ಶನಗಳಲ್ಲಿ ಮಾನಹಾನಿಕರವಾಗಿ ಮಾತನಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರಿಗೆ ದೂರು ನೀಡಿದ್ದಾರೆ. ಜ.27ರಂದು ಪುತ್ತೂರು ನಗರ ಠಾಣೆಯ ಪೊಲೀಸರು ದೂರು ಅರ್ಜಿಯ ವಿಚಾರಣೆಗೆ ಪುತ್ತೂರು ನಗರ ಠಾಣೆಗೆ ಹಾಜರಾಗುವಂತೆ ಪ್ರತಿಭಾ ಕುಳಾಯಿ ಅವರಿಗೆ ನೋಟಿಸ್ ನೀಡಲಾಗಿದೆ. ಈವರೆಗೆ ಪ್ರತಿಭಾ ಕುಳಾಯಿ ಈ ತನಕ ವಿಚಾರಣೆಗಾಗಿ ಹಾಜರಾಗಿದ್ದಾರೆ.
Karkala: Two students in serious condition in car and bike accident- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











