ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ: ಗಡಾಯಿಕಲ್ಲು ಟ್ರಕ್ಕಿಂಗ್‌ ನಿಷೇಧ

ಬೆಳ್ತಂಗಡಿ: Tulu Times | ಬೆಳ್ತಂಗಡಿ ತಾಲೂಕಿನ ಪ್ರವಾಸಿತಾಣ  ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ ಮಾಡಲಾಗಿದೆ. ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶವನ್ನು ಹೊರಡಿಸಲಾಗಿದೆ.

ಬೇಸಿಗೆ ಸಮಯದಲ್ಲಿ ಉಂಟಾಗುವ ಕಾಡ್ಗಿಚ್ಚಿನ ಸಂಭವದಿಂದ ಜಾಗೃತಿ ಮೂಡಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧ ಮಾಡಲಾಗಿದೆ.

ಗಡಾಯಿಕಲ್ಲು ಬಗ್ಗೆ ನಿಮಗೆಷ್ಟು ಗೊತ್ತು..?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪವಿರುವ  ಗಡಾಯಿಕಲ್ಲು  (ಜಮಲಾಬಾದ್ ಕೋಟೆ) ಚಾರಣವು ಸಾಹಸಪ್ರಿಯರಿಗೆ ಅತ್ಯಂತ ಆಕರ್ಷಕ ತಾಣವಾಗಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್ 2047ಕ್ಕೆ ‘ವಿಕಸಿತ ಭಾರತ’ದ ರೋಡ್‍ಮ್ಯಾಪ್: ಸಚಿವ ಅಶ್ವಿನಿ ವೈಷ್ಣವ್ ವಿಶ್ಲೇಷಣೆ

ಇದನ್ನೂ ಓದಿ: ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ಗೆದ್ದ ಉಡುಪಿಯ ಹುಡುಗ..!

ಕನ್ನಡ ಚಿತ್ರರಂಗಕ್ಕೆ ರೀ-ಎಂಟ್ರಿ ಕೊಟ್ಟ ‘ಯಾರೇ ನೀನು ಚೆಲುವೆ” ನಟಿ …ಸಂಗೀತ ಹೊಸ ಸಿನಿಮಾ ಯಾವುದು?

ಯಾರೇ ನೀನು ಚೆಲುವೆ’ ಸಿನಿಮಾ ಖ್ಯಾತಿ ನಟಿ ಸಂಗೀತ ಮಾಧವನ್ ಮತ್ತೆ ಸ್ಯಾಂಡಲ್ ವುಡ್ ಕಡೆ ಮುಖ ಮಾಡಿದ್ದಾರೆ. ಹೊಸ ತಂಡವೊಂದು ಇವರನ್ನು ಕನ್ನಡ ಚಿತ್ರರಂಗಕ್ಕೆ ಕರೆ ತಂದಿದೆ. ಲಾಂಗ್ ಗ್ಯಾಪ್ ಬಳಿಕ ಸಂಗೀತ ಕನ್ನಡ ಚಿತ್ರಪ್ರೇಮಿಗಳನ್ನು ರಂಜಿಸಲು ಸಜ್ಜಾಗಿದ್ದಾರೆ.

ಕಿಚ್ಚ ಸುದೀಪ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಕಿರಣ್ ವಿಶ್ವನಾಥ್ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ರನ್ನ, ವಿಕ್ಟರಿ ಚಿತ್ರಗಳಲ್ಲಿ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅವರೀಗ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ಅವರ ಚೊಚ್ಚಲ ಚಿತ್ರದಲ್ಲಿ ಸಂಗೀತ ಮಾಧವನ್ ಅಭಿನಯಿಸುತ್ತಿದ್ದಾರೆ. ಸಂಗೀತ ಭಾಗ್ಯ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾಯಕನ ತಾಯಿಯಾಗಿ ಅವರು ಜೀವ ತುಂಬಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಚಿತ್ರತಂಡ ಮಹಾನಟಿ ಖ್ಯಾತಿಯ ಪ್ರಿಯಾಂಕಾ ಆಚಾರ್ ಅವರನ್ನು ನಾಯಕಿಯಾಗಿ ಪರಿಚಯಿಸಿತ್ತು. ಇದೀಗ ಸಂಗೀತ ಅವರು ಸಿನಿಮಾದ ಭಾಗವಾಗಿರುವ ಬಗ್ಗೆ ಮಾಹಿತಿ ನೀಡಿದೆ.

ಈ ಸಿನಿಮಾದ ನಾಯಕ ಯಾರು ಅನ್ನೋದನ್ನು ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ. ದೊಡ್ಡದಾಗಿ ಹೀರೋ ಇಂಟರ್ಡ್ಯೂಸ್ ಮಾಡಲು ಯೋಜನೆ ಕೂಡ ಹಾಕಿಕೊಂಡಿದೆ. ಗೌರಿ ಆರ್ಟ್ಸ್ ಬ್ಯಾನರ್ ನಡಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಮುಂದಿನ ದಿನಗಳಲ್ಲಿ ಒಂದೊಂದೇ ಮಾಹಿತಿಯನ್ನು ಸಿನಿಮಾ ತಂಡ ನೀಡಲಿದೆ.‌

Belthangady: Gadaikallu trucking banned- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 127

You cannot copy content of this page