ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ಹೆಜ್ಜೇನು ದಾಳಿಗೆ ಬಾಲಕಿ ಬಲಿ – ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Puttur: ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಕೆಲ ದಿನಗಳ ಹಿಂದೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಪುಟ್ಟ ವಿದ್ಯಾರ್ಥಿಗಳಿಗೆ ಹೆಜ್ಜೇನು ಹಿಂಡು ದಾಳಿ ಮಾಡಿದ ಪರಿಣಾಮ ಓರ್ವ ವಿದ್ಯಾರ್ಥಿನಿ (ಇಶಾ) ಸಾವೀಗೀಡಾಗಿದ್ದುಅವರ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಪುತ್ತೂರು ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾಷಣದ ವೇಳೆ ಪರಿಹಾರ ಘೋಷಣೆ ಮಾಡಿದರು.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರ ನೀಡಲು ಆದೇಶವನ್ನೂ ಮಾಡಿದ್ದೇನೆ. ಹದಿನೈದು ದಿನಗಳೊಳಗೆ ಹಣ ಬರಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಹೆಜ್ಜೇನುಗಳ ದಾಳಿಯ ಪರಿಣಾಮ ಕೂಟೇಲು ಕಿರಣ್ ಎಂಬವರ ಪುತ್ರಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಇಶಾ ಅವರು ಸಾವಿಗೀಡಾಗಿದ್ದರು.

ಹೆಜ್ಜೇನುಗಳ ಹಠಾತ್‌ ದಾಳಿಯಿಂದ ತತ್ತರಿಸಿ ತೀವ್ರ ಅಸ್ವಸ್ಥಗೊಂಡ ಕೂಟೇಲು ಕಿಶೋರ್‌ ಎಂಬವರ ಪುತ್ರ ,ವಿವೇಕಾನಂದ ಕ. ಮಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿ ಪ್ರತ್ಯಶ್ ಅವರಿಗೆ ಮಂಗಳೂರು ಕೆಎಂಸಿ ಆಸ್ಪತ್ರೆಯ ವೈದ್ಯರು ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕ ಇದೀಗ ಚೇತರಿಸಿಕೊಂಡಿದ್ದಾರೆ. ಮಕ್ಕಳ ರಕ್ಷಣೆಗಾಗಿ ಹೋಗಿದ್ದ ನಾರಾಯಣ ಗೌಡರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಇದನ್ನೂ ಓದಿ: Kasaragod: ಅಲಂಕಾರಿಕ ದೀಪ ಅಳವಡಿಕೆ ವೇಳೆ ವಿದ್ಯುತ್ ಸ್ಪರ್ಶ – ಯುವಕ ಮೃತ್ಯು

===================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess  

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page