ಬ್ರೇಕಿಂಗ್ ನ್ಯೂಸ್
ಕರ್ನಾಟಕಮಂಗಳೂರು

ಮಂಗಳೂರು: ಟ್ರೇಲರ್ ಡಿಕ್ಕಿಯಾಗಿ ತಾಯಿ ಹಾಗೂ ಮಗಳು ಗಂಭೀರ

ಮಂಗಳೂರು: Tulu Times | ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ತಾಯಿ ಮಗಳಿಗೆ  ಟ್ರೇಲರ್ ಡಿಕ್ಕಿಯಾದ ಪರಿಣಾಮ  ತಾಯಿ ಹಾಗೂ ಮಗಳಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ:‌ ಡಿಜಿಟಲ್ ಯುಗದಲ್ಲಿ ಮಕ್ಕಳ ಭವಿಷ್ಯದ ಬಗ್ಗೆ ಎಚ್ಚರಿಕೆ ವಹಿಸಿ

ಗಾಯಗೊಂಡವರನ್ನು ಶಿಕ್ಷಕಿ ಕುಸುಮಾ ಮತ್ತು ಅವರ ಪುತ್ರಿ ಸುಮಲತಾ (14) ಎಂದು ಗುರುತಿಸಲಾಗಿದ್ದು, ಮುನ್ಶಿಯ ಪಾವಂಜೆ ದೇವಸ್ಥಾನದ ಬಳಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಇಬ್ಬರು ಪಾವಂಜೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಟ್ರೇಲರ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ.  ಕುಸುಮಾ ತೀವ್ರವಾಗಿ ಗಾಯಗೊಂಡಿದ್ದು, ಸುಮಲತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೆ ಕಾರಣವಾದ ಟ್ರೇಲರ್ ಅನ್ನು ವಶಪಡಿಸಿಕೊಳ್ಳಲಾಗಿದೆ.  ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:‌ ಹಿಂದೂಗಳಲ್ಲಿ ಬಡವರು ಇಲ್ಲವೇ ? : ಅಲ್ಪಸಂಖ್ಯಾತರ ಬಡ್ಡಿ ಮನ್ನಾ ವಿಷಯಕ್ಕೆ ಖಂಡನೆ

ಬೆಳ್ತಂಗಡಿ: ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ, ಮನೆಯ ಹೊರ ಛಾವಣಿಯಿಂದ ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗುತ್ತಿದೆ.

ಫೆ.5 ರಂದು ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿಡುಪಿ ಕುಂಡಾಲ್ ಮನೆ ಜಯಂತ್ ಎಂಬವರ ಮನೆಯ ಹೊರಛಾವಣಿಯಲ್ಲಿದ್ದ ಸಾಕು ನಾಯಿಯನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ಮಧ್ಯರಾತ್ರಿ ನಡೆದಿದೆ. ಮನೆಯಿಂದ ನಾಯಿಯನ್ನು ಹೊತ್ತೊಯ್ಯ ದೃಶ್ಯವು ಅವರ ಮನೆಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ.

ಚಿರತೆಯ ದಾಳಿಗೆ ತಾಲೂಕಿನಲ್ಲಿ ಸಾರ್ಕುಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದೆ. ಚಿರತೆ ಕೆಲವು ಪ್ರದೇಶಗಳಿಗೆ ಪ್ರವೇಶ ಮಾಡಿರುವುದು ಜನರಿಗೆ ಭಯ ತಂದಿದೆ. ದಿನನಿತ್ಯ ಶಾಲಾಕಾಲೇಜುಗಳಿಗೆ ತೆರಳುವ ಮಕ್ಕಳು ಇರುವುದರಿಂದ ಸಂಜೆ ಮನೆಗೆ ಬರುವಾಗ ರಾತ್ರಿಯಾಗುವ ಕಾರಣದಿಂದ ಶೀಘ್ರದಲ್ಲೇ ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಆಗ್ರಹವನ್ನು ಮಾಡುತ್ತಿದ್ದಾರೆ.

Mangaluru: Mother and daughter in critical condition after trailer collision- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 158

You cannot copy content of this page