ಸ್ಯಾಂಡಲ್ ವುಡ್: Tulu Times | ಕನ್ನಡದ ಸೂಪರ್ ಹಿಟ್ ಸಿನಿಮಾ ಬೆಲ್ ಬಾಟಮ್ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಹೊಸ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ತಮ್ಮದೇ ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್‌ನಡಿ ಹುಬ್ಬಳ್ಳಿ ಹಂಟರ್ಸ್ ಎಂಬ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ಎಡಗೈ ಅಪಘಾತಕ್ಕೆ ಕಾರಣ ಚಿತ್ರ ನಿರ್ದೇಶಿಸಿದ್ದ ಸಮರ್ಥ್ ಬಿ ಕಡ್ಕೋಲ್ ಹುಬ್ಬಳ್ಳಿ ಹಂಟರ್ಸ್ ನಿರ್ದೇಶಕರು.
ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರೆಸಿದ್ದ ಚಿತ್ರತಂಡ ಇದೀಗ ಮೊದಲ ಹಂತದ ಶೂಟಿಂಗ್ ಮುಗಿಸಿದೆ. ಹುಬ್ಬಳ್ಳಿ ನಗರದಲ್ಲಿ 14 ದಿನ ಶೂಟಿಂಗ್ ಚಿತ್ರೀಕರಣ ನಡೆಸಿದೆ. ಮಾರ್ಚ್ ತಿಂಗಳಲ್ಲಿ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಶುರು ಮಾಡಲು ಯೋಜನೆ ಹಾಕಿಕೊಂಡಿದೆ. ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ,ಮಹಾನಟಿ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.
ಇದನ್ನೂ ಓದಿ: ವಲವಾರ ಮೆಚ್ಚಿದ ಚಿತ್ರರಂಗ…ಹೊಸಬರ ಸಿನಿಮಾಗೆ ಜೈ ಎಂದ ಕವಿರಾಜ್
ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಅವರ್ ಕಥೆ ಬರೆದು ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!
ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ನಾಯಕನಾಗಿ ನಟಿಸಿರುವ, ವಿಜಯಾನಂದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಸೂಪರ್ ಹಿಟ್’. ತನ್ನ ಆಂತರ್ಯದ ಕಸುವಿನ ಸುಳಿವಿನಿಂದಲೇ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟು ಹಾಕಿದ್ದ ಈ ಸಿನಿಮಾಕ್ಕೀಗ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಜನಪ್ರಿಯತೆಯೂ ಕೂಡಾ ಮತ್ತಷ್ಟು ಶಕ್ತಿ ತುಂಬಿದೆ. ಇದೇ ಹಂತದಲ್ಲಿ ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ, ಟೀಸರ್ ಒಂದರ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ವೇದಿಕೆಯಲ್ಲಿ ನಿರ್ದೇಶಕ ವಿಜಯಾನಂದ್, ನಿರ್ಮಾಪಕ ಜಿ ಉಮೇಶ್, ಸಾಧು ಕೋಕಿಲಾ, ಗೀತರಚನೆಕಾರ ಡಾ.ವಿ ನಾಗೇಂದ್ರ ಪ್ರಸಾದ್, ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಸಿನಿಮಾ ಬಗ್ಗೆ ಭರವಸೆಯ ಮಾತಾಡುತ್ತಲೇ, ಒಂದಷ್ಟು ಮಹತ್ವದ ಅಂಶಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ.
ವಿ. ನಾಗೇಂದ್ರ ಪ್ರಸಾದ್ ಅವರ ಸಹೋದರರಾದ ವಿಜಯಾನಂದ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸೂಪರ್ ಹಿಟ್ ಬಿಡುಗಡೆ ದಿನಾಂಕ ಜಾಹೀರು ಮಾಡಿ ಮಾತಾಡಿದ ಅವರು, ಕಥೆ ಸಿದ್ಧವಾದ ಬಗೆಯಿಂದ ಮೊದಲ್ಗೊಂಡು ಈವರೆಗಿನ ಮಧುರ ಸ್ಮೃತಿಯನ್ನು ಮೆಲುಕು ಹಾಕಿದ್ದಾರೆ. ಕಥೆ ಬರೆಯಲು ಶುರು ಮಾಡಿದಾಗಿನಿಂದ ಈ ವರೆಗೂ ಎಲ್ಲವೂ ಹೂವೆತ್ತಿಟ್ಟಷ್ಟೇ ಸಲೀಸಾಗಿ ನಡೆಯುತ್ತಾ ಬಂದಿದೆ ಎಂಬ ಧನ್ಯತಾ ಭಾವ ವ್ಯಕ್ತಪಡಿಸಿರುವ ವಿಜಯಾನಂದ್, ಯಾವುದಕ್ಕೂ ಕೊರತೆಯಾಗದಂತೆ ಒಂದಿಡೀ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಜಿ ಉಮೇಶ್ ಅವರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ. ತನ್ನ ಸಿನಿಮಾ ಮೂಡಿ ಬಂದಿರುವ ರೀತಿ ಮತ್ತು ಅದರ ಕಂಟೆಂಟಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಸದರಿ ಚಿತ್ರ ಸೂಪರ್ ಹಿಟ್ಟಾಗೋದು ಗ್ಯಾರೆಂಟಿ ಎಂಬ ಭರವಸೆ ವ್ಯಕ್ತಪಡಿಸಿದರು. ನೂರು ದಿನಗಳ ಕಾಲ ಯಶಸ್ವೀ ಪ್ರದರ್ಶನ ನೀಡಲು ಅನುವು ಮಾಡಿಕೊಡುವಂತೆ ಪ್ರೇಕ್ಷಕ ಪ್ರಭುಗಳಲ್ಲಿ ವಿನಂತಿಸಿಕೊಂಡರು.
Hubballi Hunters, a story of the North Karnataka, completes first phase of shooting- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











