ಉಡುಪಿ: Tulu Times | ಚಾಲಕನ ನಿಯಂತ್ರಣ ತಪ್ಪಿ ಪ್ರಾರ್ಚೂನರ್ ಕಾರು ಚರಂಡಿಗೆ ಪಲ್ಟಿಯಾಗಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಘಟನೆಯು ರಾಷ್ಟ್ರೀಯ ಹೆದ್ದಾರಿ-66ರ ಕುಂದಾಪುರ ತಾಲೂಕಿನ ಕನ್ನುಕರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ನಡೆದಿದೆ. ಕಾರಿನಲ್ಲಿ ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್ನಲಾಗಿದೆ. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಜ.31ರಂದು ಎರಡು ಕಾರುಗಳಲ್ಲಿ ಪ್ರವಾಸ ಹೊರಟಿದ್ದಾರೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು.
ತೆಕ್ಕಟ್ಟೆ ಸಮೀಪದ ಕನ್ನುಕರೆ ಪ್ರದೇಶದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದಿದೆ. ಈ ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪುಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ.ಅಪಘಾತಕ್ಕೆ ಚಾಲಕನ ಅತೀವೇಗ ಮತ್ತು ಅಜಾಗರೂಕತೆ ಕಾರಣವಾಗಿದೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ವಿದ್ಯಾರ್ಥಿಗಳು ಮದ್ಯಪಾನ ಸೇವಿಸಿರಬಹುದು ಎಂದು ಮಾಹಿತಿ ಇದೆ. ಸ್ಥಳಕ್ಕೆ ಕೋಟ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿದ್ದಾರೆ.
ಜನ ನಾಯಕನ್’ ಶೀಘ್ರ ಬಿಡುಗಡೆ : CBFC ವಿರುದ್ಧದ ಅರ್ಜಿಯನ್ನು ಹಿಂಪಡೆಯಲು ಮದ್ರಾಸ್ ಹೈಕೋರ್ಟ್ ಅನುಮತಿ
ಚೆನ್ನೈ: ಪ್ರತ್ಯೇಕ ಪ್ರಕರಣದಲ್ಲಿ, ನಟ ತಲಪತಿ ವಿಜಯ್ ಅಭಿನಯದ ‘ಜನ ನಾಯಕನ್’ ಚಿತ್ರದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಮದ್ರಾಸ್ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ.
ಈ ನಿರ್ಧಾರಕ್ಕೆ ಹಿನ್ನೆಲೆಯಾಗಿ, ನಿರ್ಮಾಪಕರು ಸೋಮವಾರವೇ ಚಿತ್ರವನ್ನು CBFCಯ ರಿವೈಸಿಂಗ್ ಕಮಿಟಿಯ ಪರಿಶೀಲನೆಗೆ ಕಳುಹಿಸಲು ತೀರ್ಮಾನಿಸಿದ್ದರು. ಜನವರಿ 9ರಂದು ಮದ್ರಾಸ್ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠವು ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ CBFCಗೆ ನಿರ್ದೇಶನ ನೀಡಿತ್ತು. ಆದರೆ ಆ ಆದೇಶವನ್ನು ಪ್ರಶ್ನಿಸಿ CBFC ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದು, ವಿಭಾಗೀಯ ಪೀರವು ಆ ಆದೇಶಕ್ಕೆ ತಡೆ ನೀಡಿತ್ತು. ಇದಾದ ಬಳಿಕ ಕೆವಿಎನ್ ಪ್ರೊಡಕ್ಷನ್ಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಆದರೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಹಸ್ತಕ್ಷೇಪಿಸಲು ನಿರಾಕರಿಸಿ, ಹೈಕೋರ್ಟ್‌ಗೆ ಮರಳುವಂತೆ ಸೂಚಿಸಿತ್ತು.
ನಂತರ ಹೈಕೋರ್ಟ್, ಏಕಸದಸ್ಯ ನ್ಯಾಯಪೀಠದ ಆದೇಶವನ್ನು ರದ್ದುಪಡಿಸಿ, ಅಗತ್ಯವಿದ್ದಲ್ಲಿ ಹೊಸ ವಿಚಾರಣೆಗೆ ಮತ್ತೆ ಅದೇ ನ್ಯಾಯಾಧೀಶರ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ನಿರ್ಮಾಪಕರಿಗೆ ಸೂಚಿಸಿತು.
ನಿರ್ಮಾಣ ಸಂಸ್ಥೆ ತಿಳಿಸಿದಂತೆ. ಡಿಸೆಂಬರ್ 18ರಂದು CBFC ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿದ್ದು, ಪರಿಶೀಲನಾ ಸಮಿತಿಯ ಶಿಫಾರಸ್ಸಿನಂತೆ 27 ಕಟ್‌ಗಳು ಮತ್ತು ತಿದ್ದುಪಡಿಗಳನ್ನು ಮಾಡಲಾಗಿದೆ. ಆದರೂ, ಚಿತ್ರವನ್ನು ಪರಿಶೀಲಿಸಿದ ಸಮಿತಿಯ ಒಬ್ಬ ಸದಸ್ಯರ ದೂರು ಕಾರಣದಿಂದ ಪ್ರಮಾಣಪತ್ರವನ್ನು ತಡೆಹಿಡಿಯಲಾಗಿದೆ ಎಂದು ಅವರು ಆರೋಪಿಸಿದ್ದರು. ಚಿತ್ರದ ಬಿಡುಗಡೆ ವಿಳಂಬವು ದೊಡ್ಡ ರಾಜಕೀಯ ವಿವಾದಕ್ಕೂ ಕಾರಣವಾಗಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದರು.
Udupi: Procurator’s car overturns into drain, students in critical condition- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











