ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ಕೇರಳಕ್ಕೆ ಅಕ್ರಮ ಗೋಸಾಗಾಟ – ಪೊಲೀಸರಿಂದ ಫೈರಿಂಗ್

Puttur: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಸೆರೆಹಿಡಿಯಲು ಪೊಲೀಸರು 10 ಕಿ.ಮೀ ವರೆಗೆ ಚೇಸ್‌ ಮಾಡಿ ಸಿನಿಮೀಯ ರೀತಿಯಲ್ಲಿ ಸೆರೆಹಿಡಿದ್ದಾರೆ. ಚಾಲಕನಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ.

ಇಬ್ಬರು ಆರೋಪಿಗಳು ಈಚರ್‌ ವಾಹನದಲ್ಲಿ 10 ಜಾನುವಾರುಗಳನನ್ನು ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಕಾಸರಗೋಡು ಮೂಲದ ಅಬ್ದುಲ್ಲಾ (40 ವರ್ಷ) ಬಂಧಿತ ಆರೋಪಿ. ಇನ್ನೊಬ್ಬ ಆರೋಪಿ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ.

ಘಟನೆಯ ವಿವರ
ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಚರಣೆಗೆ ಇಳಿದಿದ್ದಾರೆ. ಈ ವೇಳೆ ಅನುಮಾನಾಸ್ಪದ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ.

ಕರ್ನಾಟಕದಿಂದ ಕೇರಳಕ್ಕೆ ಈಚರ್ ವಾಹನದಲ್ಲಿ ಅಕ್ರಮ ಗೋಸಾಟ ಮಾಡುತ್ತಿದ್ದ ವಾಹನ ನಿಲ್ಲಿಸಲು ಪೊಲೀಸರು ಸೂಚನೆ ನೀಡಿದ್ದಾರೆ. ಆದರೆ ಪೊಲೀಸರ ಮೇಲೆಯೇ ವಾಹನ ಚಲಾಯಿಸಲು ಆರೋಪಿಗಳು ಯತ್ನಿಸಿದ್ದಾರೆ. ಸುಮಾರು 10 ಕಿಮೀ ದೂರ ವಾಹನವನ್ನು ಪೊಲೀಸರು ಬೆನ್ನಟ್ಟಿದ್ದಾರೆ.

ಆದರೆ ವಾಹನವನ್ನು ನಿಲ್ಲಿಸದೇ ಇದ್ದಾಗ ಪಿಎಸ್ಐ ಜಂಬೂರಾಜ್‌ ಎರಡು ಸುತ್ತು ಗುಂಡುಗಳನ್ನು ಫೈಯರ್‌ ಮಾಡಿದ್ದಾರೆ. ಒಂದನ್ನು ಈಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ.

ಫಯರಿಂಗ್‌ ವೇಳೆ ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಬ್ದುಲ್ಲಾ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋಹತ್ಯೆ ಕೇಸ್‌ ಇದೆ.

ಗೋಪೂಜೆ ದಿನವೇ ಈ ದಾಳಿ ನಡೆದಿದೆ. ಅಕ್ರಮ ಗೋ ಸಾಗಾಟ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಟ್ಟಿಂಗ್ ಆಡಿ ಸೋತ ಗೃಹ ಸಚಿವ ಪರಮೇಶ್ವರ್! ಭಾರೀ ಟೀಕೆ

=============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page