ಬ್ರೇಕಿಂಗ್ ನ್ಯೂಸ್
ಕರ್ನಾಟಕಪುತ್ತೂರು

ತೆಕ್ಕಾರು: ಪಿಕಪ್‌ ಪಲ್ಟಿಯಾಗಿ ಚಾಲಕ ‌ಸ್ಥಳದಲ್ಲಿಯೇ ಮೃತ್ಯು

ತೆಕ್ಕಾರು: Tulu Times | ತೆಕ್ಕಾರಿನಲ್ಲಿ  ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕನರಾಜೆ ಎಂಬಲ್ಲಿ ಪಿಕಪ್ ವಾಹನ ಪಲ್ಟಿಯಾಗಿದೆ.

ಇದನ್ನೂ ಓದಿ: ನಿಮ್ಮ ಕೂದಲು ಕಪ್ಪಗಾಗಲು ಸರಳ ಉಪಾಯ ಇಲ್ಲಿದೆ ನೋಡಿ!

ಮೇಲ್ಬಾಗದ ರಸ್ತೆಯಿಂದ ವಾಹನ ಕೆಲಭಾಗದ ರಸ್ತೆಗೆ ಪಲ್ಟಿಯಾಗಿ ಚಾಲಕ ಅಳಕ್ಕೆ ನಿವಾಸಿ ಅವಿವಾಹಿತ ಪುಟ್ಟ (31ವ) ಎಂಬವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ  ವಾಹನ ಕೆಲಭಾಗದ ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ.  ಚಾಲಕ ಅಳಕ್ಕೆ ನಿವಾಸಿ ಅವಿವಾಹಿತ ಪುಟ್ಟ (31ವ) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್ ನಲ್ಲಿದ್ದ ನಾಲ್ಕು ಮಂದಿ ಪೈಕಿ ಮೂರು ಮಂದಿಗೆ ಗ್ವಾಯಗೊಂಡಿದ್ದಾರೆ.

ಇದನ್ನೂ ಓದಿ: ಪಿಲಿಕುಳ ಜೈವಿಕ ಉದ್ಯಾನ ನಿರ್ವಹಣೆ ಶೀಘ್ರವೇ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರ

ಪುತ್ತೂರು: ಅಜಿತ್‌ ರೈಹೊಸಮನೆ ಅವರಿಗೆ ಕೋರ್ಟ್ ನೋಟಿಸ್

ಪುತ್ತೂರು: ಪ್ರತ್ಯೇಕ ಪ್ರಕರಣದಲ್ಲಿ, ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ಗಡಿಪಾರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೋಟಿಸ್‌ ನೀಡಿದೆ.

ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಂತೆ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 25ರಂದು ನಡೆಸಲಿದೆ. ಸದ್ರಿ ಪ್ರಕರಣದಲ್ಲಿ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ತಪ್ಪಿದಲ್ಲಿ ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀ ಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನುವ ಮಾಹಿತಿ ನೀಡಿದೆ. ಅಜಿತ್ ರೈ ಹೊಸಮನೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹಿಂದೂ ಜಾಗರಣಾ ವೇದಿಕೆಯ (HJV) ಪ್ರಮುಖ ಮುಖಂಡರಾಗಿದ್ದಾರೆ.  ಇವರು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಹೊಸಮನೆಯ ನಿವಾಸಿಯಾಗಿದ್ದು, ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

Tekkaru: Driver dies after pickup overturns-ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 161

You cannot copy content of this page