ವಿಟ್ಲ: Tulu Times | ವಿಟ್ಲದ ಖಾಸಗಿ ಕಾಲೇಜಿನಲ್ಲಿ ಸಹಪಾಠಿಗಳ ಮಧ್ಯೆ ಕಿರಿಕ್ ಉಂಟಾಗಿ ಪೆನ್ ಚಾಕುವಿನಿಂದ ವಿದ್ಯಾರ್ಥಿಯೊಬ್ಬ ಇರಿದ ಘಟನೆ ನಡೆದಿದೆ.
ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ ಹಾಗೂ ಹೇಮಂತ್ (19) ಮಧ್ಯೆ ಮಾತಿಗೆ ಮಾತು ಬೆಳೆದು ದೊಡ್ಡ ಜಗಳವಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭ ಹೇಮಂತ್ ಮಹಮ್ಮದ್ ರಿಯಾನ್ ಗೆ ಪೆನ್ ಚಾಕುವಿನಿಂದ ಇರಿದು ಬಿಟ್ಟಿದ್ದಾನೆ. ಮತ್ತೋರ್ವ ವಿದ್ಯಾರ್ಥಿ ಯಜೇಶ್ ಗೂ ಗಾಯವಾಗಿದೆ. ಈತನನ್ನು ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಹೇಮಂತ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಭಾರತದಲ್ಲಿ ಸಾಂಕ್ರಾಮಿಕ ರೋಗಗಳ ತೀವ್ರತೆಗೆ ದಪ್ಪತನ ಕಾರಣವಾಗುತ್ತಿದೆಯೇ?
ಉಡುಪಿ: ಪ್ರಾರ್ಚೂನರ್ ಕಾರು ಚರಂಡಿಗೆ ಪಲ್ಟಿ: ವಿದ್ಯಾರ್ಥಿಗಳು ಗಂಭೀರ
ಉಡುಪಿ: ಪ್ರತೇಕ ಪ್ರಕರಣದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಪ್ರಾರ್ಚೂನರ್ ಕಾರು ಚರಂಡಿಗೆ ಪಲ್ಟಿಯಾಗಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಘಟನೆಯು ರಾಷ್ಟ್ರೀಯ ಹೆದ್ದಾರಿ-66ರ ಕುಂದಾಪುರ ತಾಲೂಕಿನ ಕನ್ನುಕರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ನಡೆದಿದೆ. ಕಾರಿನಲ್ಲಿ ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್ನಲಾಗಿದೆ. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಜ.31ರಂದು ಎರಡು ಕಾರುಗಳಲ್ಲಿ ಪ್ರವಾಸ ಹೊರಟಿದ್ದಾರೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು.
ತೆಕ್ಕಟ್ಟೆ ಸಮೀಪದ ಕನ್ನುಕರೆ ಪ್ರದೇಶದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದಿದೆ. ಈ ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪುಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ.ಅಪಘಾತಕ್ಕೆ ಚಾಲಕನ ಅತೀವೇಗ ಮತ್ತು ಅಜಾಗರೂಕತೆ ಕಾರಣವಾಗಿದೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ವಿದ್ಯಾರ್ಥಿಗಳು ಮದ್ಯಪಾನ ಸೇವಿಸಿರಬಹುದು ಎಂದು ಮಾಹಿತಿ ಇದೆ. ಸ್ಥಳಕ್ಕೆ ಕೋಟಿ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿದ್ದಾರೆ.
vitla-quarrel-among-college-students-knife-stabbing- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











