ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಸ್ಯಾಂಡಲ್ ವುಡ್ ಗೆ ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಎಂಟ್ರಿ !

ಸ್ಯಾಂಡಲ್‌ ವುಡ್‌ : Tulu Times | ಸ್ಯಾಂಡಲ್ ವುಡ್ ಗೆ ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಎಂಟ್ರಿ ಕೊಟ್ಟಿದ್ದಾರೆ. ಹೌದು, ಗೌರಿ ಆರ್ಟ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣ ಮಾಡಲು ಸಾರಾ ಮಹೇಶ್ ರೆಡಿಯಾಗಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸಂತಸ ತಂದಿದೆ.

ಹೊಸ ತಂಡದ ಪ್ರಯತ್ನಕ್ಕೆ ಸಾರಾ ಮಹೇಶ್ ಸಾಥ್ ಕೊಟ್ಟಿದ್ದಾರೆ. ಹೊಸ ಪ್ರತಿಭೆಗಳ ತಂಡಕ್ಕೆ ಸಾಥ್ ನೀಡಿರುವ ಅವರು, ಈ ಚಿತ್ರದ ಮೂಲಕ ಅಧಿಕೃತವಾಗಿ ನಿರ್ಮಾಪಕರಾಗಿ ಹೊಸ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಈ ಸಿನಿಮಾಗೆ ಏಳುಮಲೆ ಸಿನಿಮಾ ಖ್ಯಾತಿಯ ಪ್ರಿಯಾಂಕಾ ನಾಯಕಿಯಾಗಿ ನಟಿಸುತ್ತಿದ್ದಾರೆ.ಶೀಘ್ರದಲ್ಲೇ ಹೀರೋ ಯಾರು ಅನ್ನೋದನ್ನು ಚಿತ್ರತಂಡ ರಿವೀಲ್ ಮಾಡಲಿದೆ.

ಸುದೀಪ್ ಶಿಷ್ಯ ಕಿರಣ್ ವಿಶ್ವನಾಥ್ ನಿರ್ದೇಶನದಲ್ಲಿ ಮೂಡಿಬರ್ತಿರುವ ಸಿನಿಮಾಗೆ ಯಾರೇ ನೀನು ಚೆಲುವೆ ಖ್ಯಾತಿಯ ಸಂಗೀತ ಮಾಧವನ್ ಕಂಬ್ಯಾಕ್ ಮಾಡುತ್ತಿದ್ದಾರೆ.  ನಾಯಕನ ಹೆಸರನ್ನು ಚಿತ್ರತಂಡ ಸಸ್ಪೆನ್ಸ್ ಆಗಿಟ್ಟಿದೆ. ನಾಯಕಿ ಫಿಕ್ಸ್‌ ಆಗಿದ್ದಾರೆ. ಸಾರಾ ಮಹೇಶ್ ಅವರ ಪ್ರಯತ್ನಕ್ಕೆ ಸ್ಯಾಂಡಲ್‌ ವುಡ್‌ ಮಂದಿ ಫುಲ್‌ ಕಾತರದಿಂದ ಕಾಯುತ್ತಿದ್ದಾರೆ.

ಮಾಜಿ ಶಾಸಕ ಸಾರಾ ಮಹೇಶ್ ಬಗ್ಗೆ ನಿಮಗೆಷ್ಟು ಗೊತ್ತು..?

ಇನ್ನು ಸಾರಾ ಮಹೇಶ್‌ ಬಗ್ಗೆ ನೋಡೋದಾದ್ರೆ,  ಇವರು ಕರ್ನಾಟಕದ ಪ್ರಮುಖ ರಾಜಕಾರಣಿ ಮತ್ತು ಜನತಾ ದಳ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಇವರು ಮೈಸೂರು ಜಿಲ್ಲೆಯ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2008 ರಿಂದ ಸತತವಾಗಿ ಕೆ.ಆರ್. ನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ರವಿಶಂಕರ್ ವಿರುದ್ಧ ಪರಾಭವಗೊಂಡರು.ಮೇ 2025 ರಲ್ಲಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಾರಾ ಮಹೇಶ್ ಟೀಕಿಸಿದ್ದರು. ಗ್ಯಾರಂಟಿ ಯೋಜನೆಗಳ ನೆಪದಲ್ಲಿ ವಿದ್ಯುತ್, ಪೆಟ್ರೋಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಜನವರಿ 2026 ರ ವರದಿಗಳ ಪ್ರಕಾರ, ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಜಿ.ಟಿ. ದೇವೇಗೌಡರ ಪುತ್ರ ಹರೀಶ್ ಗೌಡ ಪ್ರತಿನಿಧಿಸುವ ಕ್ಷೇತ್ರದಿಂದ ಸಾರಾ ಮಹೇಶ್ ಸ್ಪರ್ಧಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

Former JDS MLA Sara Mahesh enters Sandalwood!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page