CM Siddaramaiah ಅಶೋಕ ಜನಮನ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತ ಮಾಡಿದ್ದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ತೂರಿನಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಇದಕ್ಕೆ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿರುಗೇಟು ನೀಡಿದ್ದಾರೆ.
ಜಿಎಸ್‌ಟಿ ಕಡಿತದಿಂದ 15,000 ಕೋಟಿ ರೂ. ಕರ್ನಾಟಕಕ್ಕೆ ನಷ್ಟವಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿಕೆಗೆ ಯಾವುದೇ ಆಧಾರವಿಲ್ಲ. ತಮ್ಮ ಸರ್ಕಾರದ ಆರ್ಥಿಕ ಅಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇ ಪದೇ ನರೇಂದ್ರ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ಸಿದ್ದರಾಮಯ್ಯನವರಿಗೆ ಶೋಭೆ ತರಲ್ಲ ಎಂದು ಸಂಸದ ಬ್ರಿಜೇಶ್ ಹೇಳಿದ್ದಾರೆ.
ಪಿಎಂ ನರೇಂದ್ರ ಮೋದಿ ಸರಕಾರವು GST ದರ ಕಡಿತದ ಮೂಲಕ ಜನ ಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರಕಾರದ ಜಿಎಸ್‌ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿ ಸುತ್ತಿದ್ದಾರೆ ಎಂದು ಚೌಟ ಆರೋಪಿಸಿದ್ದಾರೆ.
ಮೋದಿ ಸರ್ಕಾರವು ಜಿಟಿಎಸ್ ಸ್ಲ್ಯಾಬ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವುದರಿಂದ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಲಾಭವುಂಟು ಮಾಡಿದೆ. ಆದರೆ, ಯಾವುದೇ ಅಂಕಿ-ಅಂಶ ಅಥವಾ ದಾಖಲೆಯಿಲ್ಲದೆ ಸಿದ್ದರಾಮಯ್ಯನವರು ಸಾರ್ವಜನಿಕ ವೇದಿಕೆಯಲ್ಲಿ ನಿಂತು ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಆರ್ಥಿಕ ವೈಫಲ್ಯ, ಭ್ರಷ್ಟ ಆಡಳಿತ ಮತ್ತು ದುಂದು ವೆಚ್ಚಗಳಿಗೆ ಕೇಂದ್ರದ ಮೇಲೆ ದೂಷಣೆ ಮಾಡುವುದನ್ನೇ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಅಜೆಂಡಾ ಮಾಡಿಕೊಂಡಿದ್ದಾರೆ. ಅಸಂಬದ್ಧ ಗ್ಯಾರಂಟಿ ಯೋಜನೆ, ಮುಡಾ ಹಗರಣ, ವಾಲ್ಮೀಕಿ ಹಗರಣ ಹೀಗೆ ಸಿದ್ದರಾಮಯ್ಯನವರ ದುರಾಡಳಿತಕ್ಕೆ ದೊಡ್ಡ ಪಟ್ಟಿಯೇ ಇದೆ. ಇದನ್ನೆಲ್ಲ ಮುಚ್ಚಿ ಹಾಕುವುದಕ್ಕೆ ಇಡೀ ದೇಶವೇ ಸ್ವಾಗತಿಸಿರುವ ಜಿಎಸ್ಟಿ ಸುಧಾರಣೆಗಳ ಬಗ್ಗೆ ಈ ರೀತಿ ಬೇಜವಾಬ್ದಾರಿಯಿಂದ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಚೌಟ ಹೇಳಿದ್ದಾರೆ.
ಇದನ್ನೂ ಓದಿ: Vittla: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ
===================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess











