ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಬಿಜೆಪಿ ಶಾಸಕ ಭೈರತಿ ಬಸವರಾಜು ಕೊನೆಗೂ ಆರೆಸ್ಟ್ ! ಆಗಿದ್ದೇನು…?

ಬೆಂಗಳೂರು: Tulu Times | ಬಿಜೆಪಿ ಶಾಸಕ ಭೈರತಿ ಬಸವರಾಜು ಅವರನ್ನು ರೌಡಿ ಶೀಟರ್ ಬಿಕ್ಲುಶಿವ ಕೊಲೆ ಕೇಸ್ ಗೆ ಸಂಬಂಧಪಟ್ಟಂತೆ ಇಂದು ಪೊಲೀಸರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌ ಮಾಡಿದ್ದಾರೆ.

ಬಿಜೆಪಿ ಶಾಸಕ ಭೈರತಿ ಬಸವರಾಜು  ಅವರನ್ನು  ಅಹಮದಾಬಾದ್ ನಿಂದ ಬೆಂಗಳೂರು ಏರ್ ಪೋರ್ಟ್ ಗೆ ಬಂದಿಳಿಯುತ್ತಿದ್ದಂತೆ, ಪೊಲೀಸರು ಬಂಧಿಸಿದ್ದಾರೆ. ಇವರು ಕೆಲವು ದಿನಗಳಿಂದ ರೌಡಿ ಶೀಟರ್ ಬಿಕ್ಲುಶಿವ ಕೊಲೆ ಕೇಸ್  ವಿಚಾರಣೆಯ ಸಮಯ ತಲೆ ಮರೆಸಿಕೊಂಡಿದ್ದರು. ಗುಜರಾತ್‌ ರಾಜ್ಯದ ಅಹಮದಾಬಾದ್‌ ನಿಂದ  ಏರ್‌ ಪೋರ್ಟ್‌ ನಲ್ಲಿ ಇಳಿಯುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸಲಹೆ ನೀಡುವಲ್ಲಿ AI ಚಾಟ್‌ಬಾಟ್‌ಗಳು ವಿಶ್ವಾಸಾರ್ಹವಲ್ಲ

ಕೊಲೆ ಕೇಸ್‌ ಗೆ ಸಂಬಂಧಿಸಿದಂತೆ,  ಭೈರತಿ ಬಸವರಾಜು ಕುಮ್ಮಕ್ಕಿನಿಂದಲೇ ಬಿಕ್ಲುಶಿವ ಕೊಲೆಯಾಗಿದೆ ಎಂದು ಪೊಲೀಸರು ಹೈಕೋರ್ಟ್ ನಲ್ಲಿ ವಾದಿಸಿದ್ದರು. ಹೀಗಾಗಿ, ನಿರೀಕ್ಷಣಾ ಜಾಮೀನು ಸಿಗದೇ ತಲೆ ಮರೆಸಿಕೊಂಡಿದ್ದರು. ಇಂದು ಬೆಳಿಗ್ಗೆ ಸುಪ್ರೀಂಕೋರ್ಟ್ ಕೂಡ ಭೈರತಿ ಬಸವರಾಜುಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ಭೈರತಿ ಬಸವರಾಜು  ಬೆಂಗಳೂರಿಗೆ ಬಂದಿಳಿದಿದ್ದಾರೆ.

ಹಲಸೂರಿನ ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಾಸಕನ ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ಹಿಂದೆ ಸಿಐಡಿ ಪೊಲೀಸ್‌ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧ ಕಡೆ ಪತ್ತೆ ಕಾರ್ಯ ಮುಂದುವರಿಸಿದ್ದರು.

ಇದನ್ನೂ ಓದಿ: ಸ್ವಾತಂತ್ರ್ಯ ನಂತರ ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದ: ₹3.25 ಲಕ್ಷ ಕೋಟಿ ಮೌಲ್ಯದ 114 ರಫೇಲ್ ಯುದ್ಧವಿಮಾನಗಳ ಖರೀದಿ

ಈ ಮಧ್ಯೆ ಬೈರತಿ ಬಸವರಾಜು ಅವರು ವಿದೇಶಕ್ಕೆ ಪರಾರಿಯಾಗಿರಬಹುದು ಎಂದು  ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್‌ ನೋಟಿಸ್‌ ಹೊರಡಿಸಿದ್ದರು. ಬೈರತಿ ಬಸವರಾಜು, 2025ರ ಡಿಸೆಂಬರ್‌ನಲ್ಲೂ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ಹೈಕೋರ್ಟ್‌  ತಿರಸ್ಕರಿಸಿತ್ತು. ನಂತರ ಸಿಐಡಿ ಪೊಲೀಸರು ಬೈರತಿ ಬಸವರಾಜುರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದರು.

BJP MLA Bhairati Basavaraju finally arrested! What happened…?- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page