ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮಹಾಶಿವರಾತ್ರಿ ಅಂಗವಾಗಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು : Tulu Times l ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು Greater Bengaluru Authority (ಜಿಬಿಎ) ಪ್ರಕಟಿಸಿದೆ.

ಜಿಬಿಎ ವ್ಯಾಪ್ತಿಯಲ್ಲಿರುವ ಎಲ್ಲಾ ಮಾಂಸ ಅಂಗಡಿಗಳಲ್ಲಿ ಮಹಾಶಿವರಾತ್ರಿ ದಿನ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಕುರಿತು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಅಧಿಕೃತ ನೋಟಿಸ್ ಜಾರಿ ಮಾಡಿದ್ದಾರೆ.

ಮಾಂಸ ಅಂಗಡಿ ಮಾಲೀಕರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಈ ಆದೇಶವನ್ನು ಪಾಲಿಸಿ ಸಹಕರಿಸುವಂತೆ ಪ್ರಾಧಿಕಾರ ಮನವಿ ಮಾಡಿದೆ. ನಿಷೇಧವು ಮಹಾಶಿವರಾತ್ರಿ ದಿನಪೂರ್ತಿ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಭಕ್ತಿಭಾವ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Meat sale banned in Bengaluru on the occasion of Mahashivratri – ತುಳುಟೈಮ್ಸ್

ಇದನ್ನೂ ಓದಿ : ಮಹಾಶಿವರಾತ್ರಿ ಯಾವ ದಿನ? ಶುಭ ಮುಹೂರ್ತ, ಪೂಜೆ ವಿಧಾನ ಹೇಗಿರುತ್ತೆ ?

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/DgrGL2FhBLE?si=wh1oWzeTMPxS7iqQ

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page